ಸಿಎಂ ಯಡಿಯೂರಪ್ಪ ವಿರುದ್ಧ ಅಕ್ರಮ ಡಿ-ನೋಟಿಫೈ ಪ್ರಕರಣ ತನಿಖೆಗೆ ಸುಪ್ರೀಂ ತಡೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಅಕ್ರಮ ಡಿ-ನೋಟಿಫೈ ಪ್ರಕರಣ ತನಿಖೆಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.

ಬೆಳ್ಳಂದೂರು ಹಾಗೂ ದೇವರಬೀಸನಹಳ್ಳಿಯಲ್ಲಿ ಐ.ಟಿ ಕಾರಿಡಾರ್‌ಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು ಅಕ್ರಮವಾಗಿ ಡಿ-ನೋಟಿಫೈ ಮಾಡಿದ್ದ ಆರೋಪ ಎದುರಿಸುತ್ತಿದ್ದರು. ಸಾಮಾಜಿಕ ಕಾರ್ಯಕರ್ತರೊಬ್ಬರು ಈ ಬಗ್ಗೆ ಗಂಭೀರ ಆರೋಪ ಮಾಡಿದ್ದರು.

ಡಿ-ನೋಟಿಫೈ ಸಂಬಂಧ ಕಾಗ್ನಿಜನ್ಸ್ ತೆಗೆದುಕೊಂಡು ತನಿಖೆ ನಡೆಸುವಂತೆ ಹೈಕೋರ್ಟ್‌ ಸೂಚಿಸಿತ್ತು. ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.

× Chat with us