BREAKING NEWS

ಡಿಕೆಶಿ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ಹಿಂಪಡೆಯಲು ‘ಸುಪ್ರೀಂ’ ನಕಾರ

ನವದೆಹಲಿ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹಿಂಪಡೆಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.

ಡಿಕೆ ಶಿವಕುಮಾರ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಪ್ರಶ್ನಿಸಿ ಕೇಂದ್ರೀಯ ತನಿಖಾ ದಳ (ಸಿಬಿಐ) ಸುಪ್ರೀಂ ಕೋರ್ಟ್‍‌ಗೆ ಅರ್ಜಿ ಸಲ್ಲಿಸಿತ್ತು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನಿರುದ್ಧ್ ಬೋಸ್ ಮತ್ತು ಬೇಲಾ ಎಂ. ತ್ರಿವೇದಿ ಅವರನ್ನೊಳಗೊಂಡ ಪೀಠವು, ಸಿಬಿಐ ಮೇಲ್ಮನವಿಯ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಇದಕ್ಕೂ ಮುನ್ನ ಜುಲೈನಲ್ಲಿ ಕಾಂಗ್ರೆಸ್ ನಾಯಕನ ವಿರುದ್ಧ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.

ಫೆಬ್ರುವರಿಯಲ್ಲಿ, ಡಿಕೆ ಶಿವಕುಮಾರ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತು ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಕ್ರಮ ಕೈಗೊಂಡ ಬಗ್ಗೆ ವರದಿ ಸಲ್ಲಿಸುವಂತೆ ತನಿಖಾ ಸಂಸ್ಥೆಗೆ ಸೂಚಿಸಿತ್ತು.

ಏನಿದು ಪ್ರಕರಣ?

ಡಿಕೆ ಶಿವಕುಮಾರ್ ಅವರು 2013 ರಿಂದ 2018ರ ನಡುವಿನ ಅವಧಿಯಲ್ಲಿ ತಮ್ಮ ಆದಾಯಕ್ಕೂ ಮೀರಿದ ಸಂಪತ್ತು ಗಳಿಸಿದ್ದಾರೆ ಎಂದು ಆರೋಪಿಸಿ ಸಿಬಿಐ, ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ವಿವಿಧ ಕಲಂಗಳ ಅಡಿಯಲ್ಲಿ 2020ರ ಅಕ್ಟೋಬರ್ 3 ರಂದು ಪ್ರಕರಣ ದಾಖಲಿಸಿದೆ.

2017ರಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧದ ಬಳಿಕ ಶಿವಕುಮಾರ್ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಾಗಿತ್ತು.

andolanait

Recent Posts

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

2 hours ago

ಅಗಲಿದ ದೃಶ್ಯಬ್ರಹ್ಮ ಸಿಂಗೀತಂ, ‘ನಟಸಮ್ರಾಟ್’ ನಾನಾ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ   ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…

2 hours ago

ಮಹಾಲಯ ಅಮಾವಾಸ್ಯೆಗೆ ಮ.ಬೆಟ್ಟ ಸಜ್ಜು

ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ  ಹನೂರು: ಮಹಾಲಯ ಅಮಾವಾಸ್ಯೆ…

2 hours ago

ಮಹೇಂದ್ರನ ಸುತ್ತ ಅನುಮಾನದ ಹುತ್ತ!

ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…

2 hours ago

ನಲ್ಲೂರು ಅಮಾನಿ ಕೆರೆಗೆ ಹರಿದು ಬಂದ ನೀರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ  ಗುಂಡ್ಲುಪೇಟೆ:…

2 hours ago

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

16 hours ago