Mysore
29
overcast clouds

Social Media

ಬುಧವಾರ, 08 ಏಪ್ರಿಲ 2026
Light
Dark

ಅಸಹಜ ಲೈಂಗಿಕ ದೌರ್ಜನ್ಯ ಆರೋಪ: ಸೂರಜ್‌ ರೇವಣ್ಣ ಬಂಧನ

ಬೆಂಗಳೂರು: ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪ್ರಜ್ವಲ್‌ ರೇವಣ್ಣ ಈಗಗಾಲೇ ಜೈಲು ಸೇರಿದ್ದಾರೆ. ಈ ಬೆನ್ನಲ್ಲೇ ಅವರ ಅಣ್ಣ ಎಂಎಲ್‌ಸಿ ಸೂರಜ್‌ ರೇವಣ್ಣರನ್ನು ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಮೇರೆಗೆ ಪೋಲಿಸರು ಬಂಧಿಸಿದ್ದಾರೆ.

ಹಾಸನದ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಶನಿವಾರ(ಜೂ.23)ಎಂಎಲ್‌ಸಿ ಸೂರಜ್‌ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ದೂರು ದಾಖಲಾಗಿತ್ತು. ಐಪಿಸಿ ಸೆಕ್ಷನ್‌ 377,342,506 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಸೂರಜ್‌ ರೇವಣ್ಣನನ್ನ ವಿಚಾರಣೆ ನಡೆಸಿ ಬಂಧಿಸಿದ್ದಾರೆ.

ದೂರಾದಾರ ತನ್ನನ್ನು ಬ್ಲ್ಯಾಕ್‌ ಮೇಲ್‌ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಲು ಸೂರಜ್‌ ರೇವಣ್ಣ ಶನಿವಾರ ಹಾಸನ ಸೆನ್‌ ಪೊಲೀಸ್‌ ಠಾಣೆಗೆ ಆಗಮಿಸಿದ್ದರು. ಈ ವೇಳೆ ಪೊಲೀಸರು ಸೂರಜ್‌ರನ್ನು ಮುಂಜಾನೆ 4 ಗಂಟೆಯವರೆಗೆ ವಿಚಾರಣೆ ನಡೆಸಿದರು. ಬಳಿಕ ಸೂರಜ್‌ ರೇವಣ್ಣರನ್ನು ಬಂಧಿಸಿದರು.

Tags:
error: Content is protected !!