ಹಾಸನ : ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಹೋದರ, ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣರನ್ನು ಹಾಸನದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸೂರಜ್ ರೇವಣ್ಣ ನನ್ನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಅರಕಲಗೂಡು ಮೂಲದ ಜೆಡಿಎಸ್ ಕಾರ್ಯಕರ್ತನೊಬ್ಬ ಶನಿವಾರ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಂತ್ರಸ್ತ ದೂರು ನೀಡಿದ್ದರಿಂದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377 ಮತ್ತು 342 ಹಾಗೂ 506 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಡಿಜಿಪಿ ಕಚೇರಿಯಲ್ಲಿ ದೂರು ನೀಡಿದ್ದ ಸಂತ್ರಸ್ತ ಹಾಸನ ಎಸ್ಪಿಗೂ ದೂರಿನ ಪ್ರತಿಯನ್ನು ಮೇಲ್ ಮಾಡಿದ್ದರು. ಈ ದೂರಿನನ್ವಯ ಸೂರಜ್ ವಿರುದ್ಧ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ.





