ಸರಳ, ಸಾಂಪ್ರದಾಯಿಕ ಸುತ್ತೂರು ಜಾತ್ರೆ

ಮೈಸೂರು: ನಂಜನಗೂಡು ತಾಲ್ಲೂಕಿನ ಕಪಿಲಾ ತೀರದಲ್ಲಿರುವ ಸುತ್ತೂರು ಕ್ಷೇತ್ರದಲ್ಲಿ ಸರಳವಾಗಿ ಜಾತ್ರಾ ಮಹೋತ್ಸವ ಆರಂಭವಾಯಿತು.

6 ದಿನ ಅದ್ಧೂರಿಯಾಗಿ ನಡೆಯುತ್ತಿದ್ದ ಜಾತ್ರೆಯನ್ನು ಕೊರೊನಾ ಕಾರಣದಿಂದ ಎರಡೇ ದಿನಕ್ಕೆ ಸೀಮಿತಗೊಳಿಸಲಾಗಿದೆ. ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಮ್ಮುಖದಲ್ಲಿ ಜಾತ್ರೆ ಮಹೋತ್ಸವ ನಡೆಯುತ್ತಿದ್ದು, ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ, ಸಿದ್ದಗಂಗಾ ಮಠದ ಸಿದ್ದಲಿಂಗಾ ಸ್ವಾಮಿಜೀ ಸೇರಿದಂತೆ ವಿವಿಧ ಮಠಾಧಿಪತಿಗಳು, ರಾಜಕೀಯ ಮುಖಂಡರು, ಅಧಿಕಾರಿಗಳು ಭಾಗವಹಿಸಿದ್ದಾರೆ.

ಮೊದಲನೇ ದಿನದ ಜಾತ್ರಾ ಮಹೋತ್ಸವದಲ್ಲಿ ಮಾಸಿಕ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು. 23 ಜೋಡಿಗಳು ಅಸೆಮಣೆ ಏರಿದರು. ಈ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

× Chat with us