ವಿಜಯಪುರ : ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡುವಾಗ ಸ್ವಾಮೀಜಿಯೊಬ್ಬರು ಅಚಾತುರ್ಯ ಎಸಗಿದ್ದಾರೆ. ಭಾನುವಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿ ತಾವೇ ಸರ್ಕಾರಿ ಬಸ್ ಚಲಾಯಿಸಿದ್ದಾರೆ.
ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಘಟನೆ ನಡೆದಿದ್ದು, ಸುಮಾರು 5 ಕಿ.ಮೀ ವರೆಗೆ ಸರ್ಕಾರಿ ಬಸ್‌ನ್ನು ಸ್ವಾಮೀಜಿ ಚಲಾಯಿಸಿದ್ದಾರೆ. ಕೊಲ್ಹಾರದ ದಿಗಂಬರೇಶ್ವರ ಮಠದ ಕಲ್ಲಿನಾಥ್ ಸ್ವಾಮೀಜಿ ಬಸ್ ಚಲಾಯಿಸಿ ಅಚಾತುರ್ಯ ಎಸಗಿದ್ದಾರೆ.
ಸರ್ಕಾರಿ ಅಧಿಕಾರಿಗಳ ಸಮ್ಮುಖದಲ್ಲೇ ಬಸ್ ತೆಗೆದುಕೊಂಡು ಹೋಗಿ ಕೊಲ್ಹಾರ ಪಟ್ಟಣದಲ್ಲಿ ಸ್ವಾಮೀಜಿ ಸುತ್ತಾಡಿಸಿದ್ದಾರೆ. ಸ್ವಾಮೀಜಿ ಬಸ್ ಜಲಾಯಿಸುತ್ತಿದ್ದಂತೆ ಆತಂಕದಲ್ಲೇ ಪ್ರಯಾಣಿಕರು ಪ್ರಯಾಣಿಸಿದ್ದಾರೆ.
ನಿಯಮದಂತೆ ಸರ್ಕಾರಿ ಚಾಲಕ ಬಿಟ್ಟು ಬೇರೆಯವರು ಸರ್ಕಾರಿ ಬಸ್ ಚಲಾಯಿಸುವಂತಿಲ್ಲ. ಬಸ್ ಚಲಾಯಿಸುವವರು ಕಡ್ಡಾಯವಾಗಿ ಹೇವಿ ಲೈಸನ್ಸ್ ಪಡೆದಿರಬೇಕು. ಸರ್ಕಾರಿ ನಿಯಮಗಳನ್ನ ಗಾಳಿಗೆ ತೂರಿ ಸರ್ಕಾರಿ ಬಸ್‌ನ್ನು ಕಲ್ಲಿನಾಥ ಸ್ವಾಮೀಜಿ ಚಲಾಯಿಸಿದ್ದಾರೆ. ಸ್ವಾಮೀಜಿಯ ಅಚಾತುರ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…
ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…
ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…
ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…
ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…
ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…