ಸೆಂಚುರಿಯನ್, ದಕ್ಷಿಣ ಆಫ್ರಿಕಾ: ದಕ್ಷಿಣ ಆಫ್ರಿಕಾ ತಂಡ ದವರು ಟಿ20 ಕ್ರಿಕೆಟ್‌ನಲ್ಲಿ ಅತಿದೊಡ್ಡ ಮೊತ್ತವನ್ನು ಬೆನ್ನಟ್ಟಿ ಗೆಲುವು ಪಡೆದು ವಿಶ್ವದಾಖಲೆ ಮಾಡಿದರು.
ಭಾನುವಾರ ನಡೆದ ಪಂದ್ಯದಲ್ಲಿ ಏಡನ್ ಮರ್ಕರಂ ಬಳಗ ಆರು ವಿಕೆಟ್ ಗಳಿಂದ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿತು.
ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 5 ವಿಕೆಟ್ ಗಳಿಗೆ 258 ರನ್ ಪೇರಿಸಿತು. ಜಾನ್ಸನ್ ಚಾರ್ಲ್ಸ್ (118 ರನ್, 46 ಎ., 4X10, 6X11) ಮತ್ತು ಕೈಲ್ ಮೇಯರ್ಸ್ (51 ರನ್, 27 ಎ., 4X5, 6X4) ಅವರು ಅಬ್ಬರದ ಆಟವಾಡಿದರು.
ದಕ್ಷಿಣ ಆಫ್ರಿಕಾ 18.5 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 259 ರನ್ ಗಳಿಸಿ ಗೆದ್ದಿತು. ಕ್ವಿಂಟನ್ ಡಿಕಾಕ್ (100 ರನ್, 44 ಎ., 4X9, 6X8) ಮತ್ತು ರೀಜಾ ಹೆಂಡ್ರಿಕ್ಸ್ (68 ರನ್, 28 ಎ., 4X11, 6X2) ಅವರ ಸ್ಫೋಟಕ ಬ್ಯಾಟಿಂಗ್ ತಂಡದ ಗೆಲುವಿಗೆ ಕಾರಣವಾಯಿತು.
ಕಳೆದ ವರ್ಷ ನಡೆದಿದ್ದ ಪಂದ್ಯದಲ್ಲಿ ಬೆಲ್ಜಿಯಂ ತಂಡವು ಸರ್ಬಿಯಾ ನೀಡಿದ್ದ 246ರನ್‌ಗಳ ಗುರಿ ಬೆನ್ನಟ್ಟಿ ಗೆಲುವು ಸಾಧಿಸಿದ್ದು ಇದುವರೆಗಿನ ದಾಖಲೆಯಾಗಿತ್ತು.
ಸಂಕ್ಷಿಪ್ತ ಸ್ಕೋರ್:
ವೆಸ್ಟ್ ಇಂಡೀಸ್: 20 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 258 (ಕೈಲ್ ಮೇಯರ್ಸ್ 51, ಜಾನ್ಸನ್ ಚಾರ್ಲ್ಸ್ 118, ರೊಮಾರಿಯೊ ಶೆಫರ್ಡ್ ಔಟಾಗದೆ 41, ಮಾರ್ಕೊ ಜೆನ್ಸೆನ್ 52ಕ್ಕೆ 3, ವೇಯ್ನ್ ಪಾರ್ನೆಲ್ 43ಕ್ಕೆ 2)
ದಕ್ಷಿಣ ಆಫ್ರಿಕಾ: 18.5 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 259 (ಕ್ವಿಂಟನ್ ಡಿಕಾಕ್ 100, ರೀಜಾ ಹೆಂಡ್ರಿಕ್ಸ್ 68, ಏಡನ್ ಮರ್ಕರಂ ಔಟಾಗದೆ 38, ರೊವ್ಮನ್ ಪೊವೆಲ್ 27ಕ್ಕೆ 1)
ಫಲಿತಾಂಶ: ದಕ್ಷಿಣ ಆಫ್ರಿಕಾಕ್ಕೆ 6 ವಿಕೆಟ್ ಗೆಲುವು
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…