ಬಡ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

ಮೈಸೂರು: ಕೊರೊನಾ ಹಿನ್ನೆಲೆಯಲ್ಲಿ ಆನ್‌ಲೈನ್‌ ತಗರಗತಿಗಳು ನಡೆಯುತ್ತಿರುವುದರಿಂದ ಎಸ್‌ಎಸ್‌ಎಲ್‌ಸಿಯಲ್ಲಿ ವ್ಯಾಸಂಗ ಮಾಡುತ್ತಿರುವ 60 ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ವಿತರಿಸಲಾಯಿತು.

ಶುಕ್ರವಾರ ಬನ್ನೂರಿನ ರೋಟರಿ ಶಾಲೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜ ಸೇವಕ ಡಾ. ಮಹೇಂದ್ರಸಿಂಗ್ ಕಾಳಪ್ಪ ಟ್ಯಾಬ್ ವಿತರಿಸಿದರು. ಬಳಿಕ ಮಾತನಾಡಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ಶಾಲೆಗಳನ್ನು ಮುಚ್ಚಿದ್ದರಿಂದ ಆನ್‌ಲೈನ್ ತರಗತಿಗಳನ್ನು ನಡೆಸಲಾಗುತ್ತಿದೆ. ಶಾಲೆಯಲ್ಲಿನ ಕಲಿಕಾ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಆನ್‌ಲೈನ್ ಮೂಲಕ ಕಲಿಕಾ ಪ್ರಕ್ರಿಯೆಗಳು ನಡೆಯುತ್ತಿರುವುದರಿಂದ ಬಡ ವಿದ್ಯಾರ್ಥಿಗಳ ಓದಿಗೆ ತೊಂದರೆಯಾಗಿತ್ತು. ಬಡ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌, ಟ್ಯಾಬ್ ಕೊಂಡುಕೊಳ್ಳುವ ಸಾಮರ್ಥ್ಯ ಇರುವುದಿಲ್ಲ. ಇದರಿಂದ ಅವರು ತರಗತಿಗಳಿಂದ ವಂಚಿತರಾಗುತ್ತಿದ್ದರು. ಹೀಗಾಗಿ, ಹೋಬಳಿಯ ವಿವಿಧ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಅಭ್ಯಾಸ ಮಾಡುತ್ತಿರುವ ಸುಮಾರು 60 ಬಡ ಮಕ್ಕಳಿಗೆ ಉಚಿತವಾಗಿ ಟ್ಯಾಬ್ ವಿತರಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕ‌ ಅಶ್ವಿನ್ ಕುಮಾರ್, ಬಿಇಒ ಮರಿಸ್ವಾಮಿ, ಜಿಲ್ಲಾ ಸಾಕ್ಷರತಾ ಚೇರ್ಮನ್ ರೋ. ಹೆಚ್.ಆರ್.ಕೇಶವ್, ವಲಯ 9ರ ಸಹಾಯಕ ಗೌರ್ನರ್ ರೋ.ಯೋಗೇಂದ್ರ.ಬಿ.ಎಸ್, ರೋಟರಿ ಸಂಸ್ಥೆಯ ಅಧ್ಯಕ್ಷ ರೋ.ಬಾಬು ಅತ್ತಹಳ್ಳಿ, ಕಾರ್ಯದರ್ಶಿ ರೋ.ಡಾ.ರಾಜೀವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

× Chat with us