ಅಫ್ಗಾನಿಸ್ತಾನ: ಕಂದಹಾರ್‌ನ ಆಕಾಶವಾಣಿ ಕೇಂದ್ರ ವಶಕ್ಕೆ ಪಡೆದ ತಾಲಿಬಾನ್

ಕಾಬೂಲ್‌: ಅಫ್ಗಾನಿಸ್ತಾನದ ಕಂದಾಹಾರ್‌ನ ಆಕಾಶವಾಣಿ ಕೇಂದ್ರವನ್ನು ತಾಲಿಬಾನ್‌ ಶನಿವಾರ ತನ್ನ ವಶಕ್ಕೆ ಪಡದಿದೆ.

ಅಫ್ಗಾನಿಸ್ತಾನದ ದಕ್ಷಿಣ ಭಾಗದಲ್ಲಿರುವ ಬಹುತೇಕ ಸ್ಥಳಗಳಲ್ಲಿ ತಾಲಿಬಾನ್‌ ತನ್ನ ‍ಪ್ರಾಬಲ್ಯ ಸಾಧಿಸಿದೆ. ಇದಕ್ಕೆ ಸಂಬಂಧಿಸಿ ತಾಲಿಬಾನ್‌ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ.

‘ಈ ಆಕಾಶವಾಣಿ ಕೇಂದ್ರಕ್ಕೆ ‘ವಾಯ್ಸ್‌ ಆಫ್‌ ಷರಿಯಾ’ ಎಂದು ಮರುನಾಮಕರಣ ಮಾಡಲಾಗಿದೆ. ಸಂಸ್ಥೆಯ ಎಲ್ಲಾ ಸಿಬ್ಬಂದಿ ಆಕಾಶವಾಣಿ ಕೇಂದ್ರದಲ್ಲಿಯೇ ಇದ್ದಾರೆ.

ಇಲ್ಲಿ ಸುದ್ದಿ, ರಾಜಕೀಯ ವಿಶ್ಲೇಷಣೆ ಮತ್ತು ಕುರಾನ್‌ ಪಠಣವನ್ನು ಪ್ರಸಾರ ಮಾಡಲಾಗುವುದು’ ಎಂದು ವಿಡಿಯೊದಲ್ಲಿ ತಿಳಿಸಲಾಗಿದೆ. ಈ ಕೇಂದ್ರದಿಂದ ಸಂಗೀತ ಪ್ರಸಾರವಾಗುವ ಸಾಧ್ಯತೆಗಳು ಕಡಿಮೆ ಎಂದು ಮೂಲಗಳು ಹೇಳಿವೆ.

× Chat with us