ನೇಣು ಬಿಗಿದ ಸ್ಥಿತಿಯಲ್ಲಿ ತಮಿಳು ನಟ ಇಂದ್ರಕುಮಾರ್‌ ಮೃತದೇಹ ಪತ್ತೆ

ಚೆನ್ನೈ: ನೇಣುಬಿಗಿದ ಸ್ಥಿತಿಯಲ್ಲಿ ತಮಿಳು ನಟ ಇಂದ್ರಕುಮಾರ್‌ ಅವರ ಮೃತದೇಹ ಪತ್ತೆಯಾಗಿದೆ.

ಸ್ನೇಹಿತನ ಮನೆಯಲ್ಲಿ ತಂಗಿದ್ದ ಇಂದ್ರಕುಮಾರ್‌ ಅಲ್ಲಿಯೇ ಫ್ಯಾನ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಸ್ನೇಹಿತರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಶ್ರೀಲಂಕಾ ಮೂಲದ ಇಂದ್ರಕುಮಾರ್‌ ತಮಿಳಿನ ಕೆಲ ಚಿತ್ರಗಳು ಹಾಗೂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಉತ್ತಮ ಅವಕಾಶಕ್ಕಾಗಿ ಕಾಯುತ್ತಿದ್ದ ಅವರು ಖಿನ್ನತೆಯಲ್ಲಿದ್ದ ಎನ್ನಲಾಗಿದೆ.

ʻಸಾಮಾಜಿಕ ಜಾಲತಾಣದಲ್ಲಿ ವಿಡಿಯೊವೊಂದನ್ನು ಶೇರ್‌ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಸಂಬಂಧ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

× Chat with us