ನೇಣು ಬಿಗಿದ ಸ್ಥಿತಿಯಲ್ಲಿ ತಮಿಳುನಾಡಿನ ಕಿರುತೆರೆ ನಟಿ ಮೃತದೇಹ ಪತ್ತೆ

ಚೆನ್ನೈ: ತಮಿಳುನಾಡಿನ ಕಿರುತೆರೆ ಖ್ಯಾತ ನಟಿ ಹಾಗೂ ನಿರೂಪಕಿ ವಿಜೆ ಚಿತ್ರಾ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಚೆನ್ನೈನ ಪಂಚತಾರಾ ಹೋಟೆಲ್‌ನಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು, ನಟಿ ಹೋಟೆಲ್‌ನ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ.

ಜನಪ್ರಿಯ ಪಾಂಡಿಯನ್ ಸ್ಟೋರ್ಸ್‌ ಧಾರಾವಾಹಿಯಲ್ಲಿ ಮುಲ್ಲೈಪಾತ್ರದಲ್ಲಿ ನಟಿಸಿ ಖ್ಯಾತಿ ಪಡೆದಿರುವ ಚಿತ್ರಾ, ಹೆಚ್ಚಿನ ಮನ್ನಣೆಗೆ ಪಾತ್ರವಾಗಿದ್ದರು.

× Chat with us