ನವದೆಹಲಿ : ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದ್ದು, ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ತಮ್ಮ ಪಾಲಿನ ನೀರು ಬಿಡುತ್ತಿಲ್ಲ ಎಂದು ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ಗೆ ಸೋಮವಾರ ಅರ್ಜಿ ಸಲ್ಲಿಸಿದೆ.
ಕರ್ನಾಟಕ ನೀರು ಬಿಡದ ಕಾರಣ ರಾಜ್ಯದಕಲ್ಲಿ ಬೆಳೆ ಹಾನಿಯಾಗಿದೆ. ತಮಿಳುನಾಡಿನ ಕಾವೇರಿ ನದಿ ಪಾತ್ರದಲ್ಲಿ ಬೆಳೆಗಳು ಒಣಗುತ್ತಿವೆ. ತಮ್ಮ ಪಾಲಿನ ನೀರು ಬಿಡುಗಡೆಗೆ ಸೂಚಿಸುವಂತೆ ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಅರ್ಜಿಯಲ್ಲಿ ತಮಿಳುನಾಡು ಸರ್ಕಾರ ಉಲ್ಲೇಖಿಸಿದೆ.
ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿ ಕರ್ನಾಟಕವು ಕಾವೇರಿ ನೀರು ನಿಯಂತ್ರಣ ಸಮಿತಿಯ ಸೂಚನೆಯನ್ನು ಪಾಲಿಸುತ್ತಿಲ್ಲ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈಮುರುಗನ್ ಕಳೆದ ವಾರ ಆರೋಪಿಸಿದ್ದರು.
ಅಲ್ಲದೆ, ಈ ವಿಚಾರವಾಗಿ ಸುಪ್ರೀಂ ಕೋರ್ಟ್ಗೆ ಮೊರೆಹೋಗುತ್ತೇವೆ ಎಂದೂ ಹೇಳಿದ್ದರು. ಅದಕ್ಕೂ ಮುನ್ನ ನಡೆದಿದ್ದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ತಮಿಳುನಾಡಿನ ಅಧಿಕಾರಿಗಳು ಸಭೆಯಿಂದ ಹೊರನಡೆದ ಘಟನೆಯೂ ನಡೆದಿತ್ತು.
ಕಾವೇರಿ ನೀರು ಬಿಡುಗಡೆ; ಕರ್ನಾಟಕದ ವಾದವೇನು? : ಕರ್ನಾಟಕದಲ್ಲಿ ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿಯೂ ಹೇಳಿಕೊಳ್ಳುವಂಥ ಮಳೆಯಾಗಿಲ್ಲ. ಹೀಗಾಗಿ ಹೆಚ್ಚು ನೀರು ಬಿಡುವುದು ಕಷ್ಟ ಎಂಬುದು ಕರ್ನಾಟಕದ ವಾದವಾಗಿದೆ.
ಕಾವೇರಿ ನೀರು ನಿಯಂತ್ರಣ ಸಮಿತಿಯು 15 ದಿನಗಳ ಕಾಲ 15,000 ಕ್ಯೂಸೆಕ್ ಬಿಡುಗಡೆ ಮಾಡಲು ನಿರ್ಧರಿಸಿತ್ತು. ಇದಕ್ಕೆ ಕಳೆದ ಶುಕ್ರವಾರ ನಡೆದಿದ್ದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ರಾಜ್ಯದ ಅಧಿಕಾರಿಗಳು ಅಸಮ್ಮತಿ ಸೂಚಿಸಿದ್ದರು.
ಆಗಸ್ಟ್ 22 ರವರೆಗೆ ತಮಿಳುನಾಡಿಗೆ ಕೇವಲ 8,000 ಕ್ಯೂಸೆಕ್‌ಗಳನ್ನು ಮಾತ್ರ ಬಿಡುಗಡೆ ಮಾಡಬಹುದಷ್ಟೇ ಎಂದು ಕರ್ನಾಟಕದ ಅಧಿಕಾರಿಗಳು ತಿಳಿಸಿದ್ದರು. ಇದಕ್ಕೆ ಸಂಬಂಧಿಸಿದ ಕಾರಣವನ್ನು ಮನವರಿಕೆ ಮಾಡಿಕೊಟ್ಟಿದ್ದರು. ಆದರೆ, ಇದು ತಮಿಳುನಾಡಿನ ಅಸಮಾಧಾನಕ್ಕೆ ಕಾರಣವಾಗಿದೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…