ತೌಕ್ತೆ ಚಂಡಮಾರುತ: ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ತೌಕ್ತೆ ಚಂಡಮಾರುತ ಪರಿಣಾಮ ಹೆಚ್ಚಾಗಿದ್ದು, ಮಂಗಳೂರು, ದಕ್ಷಿಣ ಕನ್ನಡ ಸೇರಿದಂತೆ ಹಲವೆಡೆ ಮಳೆಯ ಅಬ್ಬರ ಹೆಚ್ಚಾಗಿದೆ.

ಮಂಗಳೂರು ನಗರದಲ್ಲಿ ಮುಂಜಾನೆಯಿಂದ ಜಡಿಮಳೆ ಆರಂಭವಾಗಿದೆ. ನಗರಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಚಂಡಮಾರುತದಿಂದಾಗಿ ಸಮುದ್ರದಲ್ಲಿ ಸಿಲುಕಿದ್ದ ಮೂವರು ಮೀನುಗಾರರನ್ನು ರಕ್ಷಿಸಲಾಗಿದೆ. ಜಿಲ್ಲಾಡಳಿತ ಎನ್‌ಡಿಆರ್‌ಎಫ್ ತಂಡವನ್ನು ಸನ್ನದ್ಧ ಸ್ಥಿತಿಯಲ್ಲಿರಿಸಿದೆ.

ಕೊಡಗು ಜಿಲ್ಲೆಯಲ್ಲೂ ಮಳೆಯ ಆತಂಕ ಹೆಚ್ಚಿದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಅಂತೆಯೇ ಮೈಸೂರಿನಲ್ಲೂ ಶನಿವಾರ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಸೋನೆ ಸುರಿಯುತ್ತಿದೆ. ನಗರದಲ್ಲೂ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

× Chat with us