ಹಾಸನ: ಮಾಜಿ ಪ್ರದಾನಿ ಹೆಚ್‌ಡಿ ದೇವೇಗೌಡ ಅವರು ತೆರಳುತ್ತಿದ್ದ ಹೆಲಿಕಾಪ್ಟರ್ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಜಿಲ್ಲೆಯ ಸಕಲೇಶಪುರದ ತಾಲೂಕು ಕ್ರೀಡಾಂಗಣದಲ್ಲಿ ನಡೆದಿದೆ.
ಮೇಲೆ ಹಾರಿದ್ದ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಕಾರಣ ಪೈಲೆಟ್ ಕೆಳಗಿಳಿಸಿದ್ದಾರೆ. ಬಳಿಕ ಸಮಸ್ಯೆ ಸರಿಪಡಿಸಿ ಮತ್ತೆ ತೆರಳಲಾಗಿದೆ. ಹೆಲಿಕಾಪ್ಟರ್‌ನಲ್ಲಿ ಹೆಚ್‌ಡಿ ದೇವೇಗೌಡ, JDS ರಾಜ್ಯಾಧ್ಯಕ್ಷ ಇಬ್ರಾಹಿಂ ಪ್ರಯಾಣಿಸಿದ್ದು, ಎಚ್.ಕೆ.ಕುಮಾರಸ್ವಾಮಿ ಪರ ಮತಯಾಚಿಸಿ ಸಕಲೇಶಪುರದಿಂದ ಅರಕಲಗೂಡಿಗೆ ತೆರಳುತ್ತಿದ್ದರು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂಚರಿಸುತ್ತಿದ್ದ ಹೆಲಿಕಾಪ್ಟರ್ಗೆ ಹದ್ದು ಡಿಕ್ಕಿಯಾದ ಘಟನೆ ಇನ್ನೂ ಹಸಿಯಾಗಿರುವಾಗಲೇ ಅವರು ಬಂದಿಳಿದ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ರಾಮತೀರ್ಥ ಬಳಿಯ ಹೆಲಿಪ್ಯಾಡ್ನಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದೆ. ಮೈಸೂರಿನಿಂದ ಹೊನ್ನಾವರಕ್ಕೆ ಹೆಲಿಕಾಪ್ಟರ್‌ನಲ್ಲಿ ತೆರಳಿದ್ದ ಶಿವಕುಮಾರ್ ಅವರು ರಾಮತೀರ್ಥದ ಹೆಲಿಪ್ಯಾಡ್ಗೆ ಬಂದಿಳಿದಿದ್ದರು.
ಈ ವೇಳೆ, ಹೆಲಿಪ್ಯಾಡ್ನ ಬಳಿಯ ಹುಲ್ಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೆಲಿಕಾಪ್ಟರ್ಗೆ ಸಿಗ್ನಲ್ ಕೊಡುವ ಸ್ಮೋಕ್ ಕ್ಯಾಂಡಲ್ನಿಂದ ಬೆಂಕಿ ಆವರಿಸಿದೆ ಎಂದು ಹೇಳಲಾಗುತ್ತಿದೆ. ಹುಲ್ಲಿಗೆ ಹೊತ್ತಿಕೊಂಡ ಬೆಂಕಿಯನ್ನು ಕೂಡಲೇ ಸಿಬ್ಬಂದಿ ಆರಿಸಿದ್ದು, ಸಂಭಾವ್ಯ ದುರಂತ ತಪ್ಪಿದೆ.
ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್‌ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…
315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…
ಲಂಡನ್ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…
ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…
ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…
ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…