BREAKING NEWS

ತಾಂತ್ರಿಕ ಸಮಸ್ಯೆ: ಹೆಚ್​ಡಿ ದೇವೇಗೌಡರು ತೆರಳುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಹಾಸನ: ಮಾಜಿ ಪ್ರದಾನಿ ಹೆಚ್​ಡಿ ದೇವೇಗೌಡ ಅವರು ತೆರಳುತ್ತಿದ್ದ ಹೆಲಿಕಾಪ್ಟರ್ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಜಿಲ್ಲೆಯ ಸಕಲೇಶಪುರದ ತಾಲೂಕು ಕ್ರೀಡಾಂಗಣದಲ್ಲಿ ನಡೆದಿದೆ.

ಮೇಲೆ ಹಾರಿದ್ದ ಹೆಲಿಕಾಪ್ಟರ್​​ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಕಾರಣ ಪೈಲೆಟ್​ ಕೆಳಗಿಳಿಸಿದ್ದಾರೆ. ಬಳಿಕ ಸಮಸ್ಯೆ ಸರಿಪಡಿಸಿ ಮತ್ತೆ ತೆರಳಲಾಗಿದೆ. ಹೆಲಿಕಾಪ್ಟರ್‌ನಲ್ಲಿ ಹೆಚ್‌ಡಿ ದೇವೇಗೌಡ, JDS ರಾಜ್ಯಾಧ್ಯಕ್ಷ ಇಬ್ರಾಹಿಂ ಪ್ರಯಾಣಿಸಿದ್ದು, ಎಚ್.ಕೆ.ಕುಮಾರಸ್ವಾಮಿ ಪರ ಮತಯಾಚಿಸಿ ಸಕಲೇಶಪುರದಿಂದ ಅರಕಲಗೂಡಿಗೆ ತೆರಳುತ್ತಿದ್ದರು.

ಡಿಕೆ ಶಿವಕುಮಾರ್​ ಬಂದಿಳಿದ ಹೆಲಿಪ್ಯಾಡ್​​​ ಬಳಿ ಬೆಂಕಿ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಸಂಚರಿಸುತ್ತಿದ್ದ ಹೆಲಿಕಾಪ್ಟರ್​ಗೆ ಹದ್ದು ಡಿಕ್ಕಿಯಾದ ಘಟನೆ ಇನ್ನೂ ಹಸಿಯಾಗಿರುವಾಗಲೇ ಅವರು ಬಂದಿಳಿದ ಹೆಲಿಪ್ಯಾಡ್​​​ ಬಳಿ ಬೆಂಕಿ ಕಾಣಿಸಿಕೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ರಾಮತೀರ್ಥ ಬಳಿಯ ಹೆಲಿಪ್ಯಾಡ್​ನಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದೆ. ಮೈಸೂರಿನಿಂದ ಹೊನ್ನಾವರಕ್ಕೆ ಹೆಲಿಕಾಪ್ಟರ್​​ನಲ್ಲಿ ತೆರಳಿದ್ದ ಶಿವಕುಮಾರ್ ಅವರು ರಾಮತೀರ್ಥದ ಹೆಲಿಪ್ಯಾಡ್​ಗೆ ಬಂದಿಳಿದಿದ್ದರು.

ಈ ವೇಳೆ, ಹೆಲಿಪ್ಯಾಡ್​ನ ಬಳಿಯ ಹುಲ್ಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೆಲಿಕಾಪ್ಟರ್​ಗೆ ಸಿಗ್ನಲ್​​ ಕೊಡುವ ಸ್ಮೋಕ್​ ಕ್ಯಾಂಡಲ್​ನಿಂದ ಬೆಂಕಿ ಆವರಿಸಿದೆ ಎಂದು ಹೇಳಲಾಗುತ್ತಿದೆ. ಹುಲ್ಲಿಗೆ ಹೊತ್ತಿಕೊಂಡ ಬೆಂಕಿಯನ್ನು ಕೂಡಲೇ ಸಿಬ್ಬಂದಿ ಆರಿಸಿದ್ದು, ಸಂಭಾವ್ಯ ದುರಂತ ತಪ್ಪಿದೆ.

andolanait

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

11 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

12 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

12 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

12 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

13 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

16 hours ago