BREAKING NEWS

ತೆಲಂಗಾಣ: ಇಂಟರ್ಮೀಡಿಯೆಟ್ ಫಲಿತಾಂಶದಿಂದ ನೊಂದ 10 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣು!

ಹೈದರಾಬಾದ್: ತೆಲಂಗಾಣದಲ್ಲಿ ಇಂಟರ್ಮೀಡಿಯೆಟ್ ಪರೀಕ್ಷೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ನಡೆದ ಸರಣಿ ಆತ್ಮಹತ್ಯೆ ಪ್ರಕರಣಗಳಲ್ಲಿ ಬುಧವಾರ ಎಂಟು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಮ್ಮ ಇಂಟರ್ಮೀಡಿಯೆಟ್ ಪರೀಕ್ಷೆಗಳಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮತ್ತು ಫೇಲ್ ಆದ ಕಾರಣ ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವರದಿಯಾದ ಪ್ರಕರಣಗಳಲ್ಲಿ, ಹೈದರಾಬಾದ್‌ನ ಪೊಲೀಸ್ ಕಮಿಷನರ್‌ ವ್ಯಾಪ್ತಿಯಲ್ಲಿ ಆರು ಪ್ರಕರಣಗಳು ದಾಖಲಾಗಿದ್ದರೆ, ಉಳಿದ ಘಟನೆಗಳನ್ನು ಸಂಗಾರೆಡ್ಡಿಯ ಬಿಡಿಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ವನಪರ್ತಿಯ ಕೊತಕೋಟಾ ಮತ್ತು ಜಗ್ತಿಯಾಲ್ ಜಿಲ್ಲೆಯ ಮೆಡಿಪಲ್ಲಿಯಲ್ಲಿ ದಾಖಲಾಗಿವೆ.

ಮೊದಲ ವರ್ಷದ ಇಂಟರ್ ಮೀಡಿಯೇಟ್ ವಿದ್ಯಾರ್ಥಿನಿ ಶಾಂತಿ ಕುಮಾರಿ ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ರಾಯದುರ್ಗಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಎರಡನೇ ವರ್ಷದ ವಿದ್ಯಾರ್ಥಿನಿ ಹಾಗೂ ಪುಂಜಗುಟ್ಟ ನಿವಾಸಿ ಅಂಬಟಿ ಹರಿತಾ ಎಂಬ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

andolanait

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

4 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

6 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

7 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

7 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

7 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

8 hours ago