ಇಂದು ( ಡಿಸೆಂಬರ್ 3 ) ರಾಜಸ್ಥಾನ್, ತೆಲಂಗಾಣ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢ್ ಕ್ಷೇತ್ರಗಳ ವಿಧಾನಸಭೆಯ ಮತ ಎಣಿಕೆ ನಡೆಯುತ್ತಿದ್ದು, ಮತ ಎಣಿಕೆ ಆರಂಭವಾದಾಗಿನಿಂದಲೂ ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.
ಆರಂಭದಿಂದಲೂ ಮುನ್ನಡೆ ಸಾಧಿಸಿ ಗೆಲುವಿನತ್ತ ಹೆಜ್ಜೆ ಹಾಕುತ್ತಿರುವ ಕಾಂಗ್ರೆಸ್ ತನ್ನ ಗೆಲುವಿನ ಖಾತೆ ತೆರೆದಿದೆ. ಹೌದು, ಇಲ್ಲಿನ ಅಶ್ವರಾವುಪೇಟ ವಿಧಾನಸಭೆ ಕ್ಷೇತ್ರದಲ್ಲಿ ಆದಿನಾರಾಯಣ ಎಂಬ ಕಾಂಗ್ರೆಸ್ ಅಭ್ಯರ್ಥಿ ಬರೋಬ್ಬರಿ 28358 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಮೊದಲ ಅಭ್ಯರ್ಥಿ ಎನಿಸಿಕೊಂಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಗೆಲುವಿನ ಖಾತೆ ತೆರೆದಿದ್ದು, ಉಳಿದ ಪಕ್ಷಗಳು ಇನ್ನೂ ಗೆಲುವಿನ ಅಕೌಂಟ್ ಓಪನ್ ಮಾಡಬೇಕಿದೆ.
ಇನ್ನು ತೆಲಂಗಾಣದಲ್ಲಿ ಕಾಂಗ್ರೆಸ್‌ನ ಮತ್ತೋರ್ವ ಅಭ್ಯರ್ಥಿ ಗೆಲುವು ಸಾಧಿಸಿದ್ದು, ಇಲ್ಲಂದು ವಿಧಾನಸಭೆ ಕ್ಷೇತ್ರದಲ್ಲಿ ಕನಕಯ್ಯ ಬರೋಬ್ಬರಿ 38000 ಮತಗಳ ಅಂತರದಿಂದ ಗೆಲುವು ಸಾಧಿಸಿದೆ.





