BREAKING NEWS

Telangana Election Results 2023: ಗೆಲುವಿನ ಖಾತೆ ತೆರೆದ ಕಾಂಗ್ರೆಸ್;‌ 28000 ಮತಗಳ ಭರ್ಜರಿ ಜಯ

ಇಂದು ( ಡಿಸೆಂಬರ್‌ 3 ) ರಾಜಸ್ಥಾನ್‌, ತೆಲಂಗಾಣ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢ್‌ ಕ್ಷೇತ್ರಗಳ ವಿಧಾನಸಭೆಯ ಮತ ಎಣಿಕೆ ನಡೆಯುತ್ತಿದ್ದು, ಮತ ಎಣಿಕೆ ಆರಂಭವಾದಾಗಿನಿಂದಲೂ ತೆಲಂಗಾಣದಲ್ಲಿ ಕಾಂಗ್ರೆಸ್‌ ಮುನ್ನಡೆ ಕಾಯ್ದುಕೊಂಡಿದೆ.

ಆರಂಭದಿಂದಲೂ ಮುನ್ನಡೆ ಸಾಧಿಸಿ ಗೆಲುವಿನತ್ತ ಹೆಜ್ಜೆ ಹಾಕುತ್ತಿರುವ ಕಾಂಗ್ರೆಸ್‌ ತನ್ನ ಗೆಲುವಿನ ಖಾತೆ ತೆರೆದಿದೆ. ಹೌದು, ಇಲ್ಲಿನ ಅಶ್ವರಾವುಪೇಟ ವಿಧಾನಸಭೆ ಕ್ಷೇತ್ರದಲ್ಲಿ ಆದಿನಾರಾಯಣ ಎಂಬ ಕಾಂಗ್ರೆಸ್‌ ಅಭ್ಯರ್ಥಿ ಬರೋಬ್ಬರಿ 28358 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಮೊದಲ ಅಭ್ಯರ್ಥಿ ಎನಿಸಿಕೊಂಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ ಗೆಲುವಿನ ಖಾತೆ ತೆರೆದಿದ್ದು, ಉಳಿದ ಪಕ್ಷಗಳು ಇನ್ನೂ ಗೆಲುವಿನ ಅಕೌಂಟ್‌ ಓಪನ್‌ ಮಾಡಬೇಕಿದೆ.

ಇನ್ನು ತೆಲಂಗಾಣದಲ್ಲಿ ಕಾಂಗ್ರೆಸ್‌ನ ಮತ್ತೋರ್ವ ಅಭ್ಯರ್ಥಿ ಗೆಲುವು ಸಾಧಿಸಿದ್ದು, ಇಲ್ಲಂದು ವಿಧಾನಸಭೆ ಕ್ಷೇತ್ರದಲ್ಲಿ ಕನಕಯ್ಯ ಬರೋಬ್ಬರಿ 38000 ಮತಗಳ ಅಂತರದಿಂದ ಗೆಲುವು ಸಾಧಿಸಿದೆ. 

andolana

Recent Posts

ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕಾರ

ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್‌…

17 mins ago

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗ: ಕೊಂಡದಲ್ಲಿ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

54 mins ago

ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…

2 hours ago

ಅಂಡಮಾನ್‌ ಸಮುದ್ರದಲ್ಲಿ ಮುಳುಗಿದ ವಲಸಿಗರಿದ್ದ ದೋಣಿ: 250 ಜನ ಕಣ್ಮರೆ

ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್‌ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…

2 hours ago

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

2 hours ago

ಹನೂರು| ಕುಡಿಯುವ ನೀರಿಗೆ ಹಾಹಾಕಾರ: ಖಾಲಿ ಬಿಂದಿಗೆ ಹಿಡಿದು ಮಹಿಳೆಯರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…

3 hours ago