ಇಂದು ( ಡಿಸೆಂಬರ್ 3 ) ತೆಲಂಗಾಣ ರಾಜ್ಯದ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಮ್ಯಾಜಿಕ್ ನಂಬರ್‌ಗಿಂತ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡು ಗೆಲುವಿನತ್ತ ದಾಪುಗಾಲು ಇಡುತ್ತಿದೆ.
ತೆಲಂಗಾಣ ಕಾಂಗ್ರೆಸ್‌ನ ಅಧ್ಯಕ್ಷ ರೇವಂತ್ ರೆಡ್ಡಿ ಕಾಮರೆಡ್ಡಿ ಹಾಗೂ ಕೊಡಂಗಲ್ ಎರಡೂ ವಿಧಾನಸಭಾ ಕ್ಷೇತ್ರದಲ್ಲಿಯೂ ಮುನ್ನಡೆಯನ್ನು ಸಾಧಿಸಿದ್ದಾರೆ. ಈಗಾಗಲೇ ರೇವಂತ್ ರೆಡ್ಡಿ ರೋಡ್ ಶೋ ಸಹ ನಡೆದಿದ್ದು, ಇವರು ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿಯಾಗುವ ಸಾಧ್ಯತೆ ಹೆಚ್ಚಿದೆ. ತೆಲಂಗಾಣದಲ್ಲಿ ಮುಖ್ಯಮಂತ್ರಿಯಾಗಲು ರೇಸ್‌ನಲ್ಲಿರುವ ಅಭ್ಯರ್ಥಿಗಳ ಪಟ್ಟಿ ಈ ಕೆಳಕಂಡಂತಿದೆ..
* ರೇವಂತ್ ರೆಡ್ಡಿ – ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಸಕ್ಸಸ್‌ಗೆ ಪ್ರಮುಖ ಕಾರಣರಾಗಿರುವ ರೇವಂತ್ ರೆಡ್ಡಿ ಸಿಎಂ ರೇಸ್‌ನಲ್ಲಿರುವ ಪ್ರಮುಖ ಅಭ್ಯರ್ಥಿ.
* ಮಲ್ಲು ಭಟ್ಟಿ ವಿಕ್ರಮಾರ್ಕ – ತೆಲಂಗಾಣ ವಿಧಾನಸಭೆಯ ದ್ವಿತೀಯ ವಿರೋಧಪಕ್ಷದ ನಾಯಕನಾಗಿದ್ದ ಮಲ್ಲು ಭಟ್ಟಿ ವಿಕ್ರಮಾರ್ಕ ಸಹ ಸಿಎಂ ರೇಸ್‌ನಲ್ಲಿದ್ದಾರೆ.
* ಕೊಮಟಿರೆಡ್ಡಿ ವೆಂಕಟರೆಡ್ಡಿ – ಭುವನಗಿರಿಯ ಎಂಪಿಯಾಗಿರುವ ಕೊಮಟಿರೆಡ್ಡಿ ಸಹ ಸಿಎಂ ರೇಸ್‌ನಲ್ಲಿರುವ ಅಭ್ಯರ್ಥಿ.
* ಪೊಂಗುಲೆಟಿ ಶ್ರೀನಿವಾಸ್ ರೆಡ್ಡಿ – ಈ ಹಿಂದೆ ಬಿಆರ್‌ಎಸ್ ಪಕ್ಷದಲ್ಲಿದ್ದು ಇದೇ ವರ್ಷ ಪಕ್ಷದ ವಿರುದ್ಧದ ಚಟುವಟಿಕೆಗಳಿಂದ ಅಮಾನತ್ತುಗೊಂಡಿದ್ದ ಇವರು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ್ದು ಸಿಎಂ ಸ್ಥಾನದ ರೇಸ್‌ನಲ್ಲಿದ್ದಾರೆ.
ಪಂಜು ಗಂಗೊಳ್ಳಿ ಜೈಲಿನ ಅನಕ್ಷರಸ್ಥ ಕೈದಿಗಳನ್ನು ಅಕ್ಷರಸ್ಥರನ್ನಾಗಿಸಲು ಮಹತ್ವದ ಯೋಜನೆ ರಾಜೇಶ್ ಕುಮಾರ್ ಯಾವತ್ತೂ ಶಾಲೆಯ ಮಟ್ಟಿಲು ಹತ್ತಿದವನಲ್ಲ. ಹಾಗಾಗಿ,…
ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…
ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…
ಮೈಸೂರು: ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್‌ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…
ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…