ಹೈದರಾಬಾದ್ – ತೆಲಂಗಾಣ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ಬಂಡಿ ಸಂಜಯ್ ಕುಮಾರ್ ಅವರನ್ನು ಮಧ್ಯರಾತ್ರಿಯ ಕರೀಂನಗರದಲ್ಲಿ ಪೊಲೀಸರ ತಂಡ ಬಂಧಿಸಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವನ್ನು ಟೀಕಿಸಿದ್ದ ಅವರು ಸಿಎಂ ಚಂದ್ರಶೇಖರ ರಾವ್ ವಿರುದ್ದ ವಾಗ್ದಾಳಿ ನಡೆಸಿದ್ದರು. ವಾರಾಂತ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯಕ್ಕೆ ಭೇಟಿ ನೀಡುವ ಕಾಯುಕ್ರಮವಿದ್ದು ಇದರ ಸಿದ್ದತೆ ನಡುವೆ ಬಂಧಿಸಿರುವುದಕ್ಕೆ ವ್ಯಾಪಕ ಟೀಕೆಗಳು ಶುರುವಾಗಿದೆ.
ಸಂಸದರ ನಿವಾಸದ ಬಳಿ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರು ಪೊಲೀಸರನ್ನು ತಡೆಯಲು ಯತ್ನಿಸಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪ್ರಸ್ತುತ ಅವರನ್ನು ನಲ್ಗೌಂಡ ಜಿಲ್ಲೆಯ ಬೊಮ್ಮಲ ರಾಮರಾಮ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.
ಯಾವ ಕಾರಣಕ್ಕೆ ಬಂಧಿಸಲಾಗಿದೆ ಎಂಬುದು ಗೊತ್ತಿಲ್ಲ ಬೆಳಗ್ಗೆಯೇ ಕಾನೂನು ಪ್ರಕ್ರಿಯೆಯನ್ನು ಪ್ರಾರಂಭಿಸಬೇಕಿತ್ತು ಆದರೆ ಸಂಸದರನ್ನು ಎಲ್ಲಿಗೆ ಕರೆದುಕೊಮಡು ಹೋಗಿದ್ದಾರೆ ತಿಳಿಯುತ್ತಿಲ್ಲ ತೆಲಂಗಾಣದಲ್ಲಿ ಪ್ರಧಾನಿ ಮೋದಿ ಅವರು ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದು ಇದರ ಹಿಂದಿನ ಉದ್ದೇಶ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೇಮೇಂದ್ರ ರೆಡ್ಡಿ ತಿಳಿಸಿದ್ದಾರೆ.
ಬಂಡಿ ಸಂಜಯ್ ಬಂಧನದ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ತೆಲಂಗಾಣ ಬಿಜೆಪಿ ನಾಯಕರು ತಿಳಿಸಿದ್ದಾರೆ.





