BREAKING NEWS

Telangana Election Results 2023: ಕೆಸಿಆರ್‌ ಹಾಗೂ ಪುತ್ರನಿಗೆ ಹಿನ್ನಡೆ

ಇಂದು ( ಡಿಸೆಂಬರ್‌ 3 ) ರಾಜಸ್ಥಾನ್‌, ತೆಲಂಗಾಣ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢ್‌ ಕ್ಷೇತ್ರಗಳ ವಿಧಾನಸಭೆಯ ಮತ ಎಣಿಕೆ ನಡೆಯುತ್ತಿದ್ದು, ನೆರೆಯ ತೆಲಂಗಾಣದಲ್ಲಿ ಕಾಂಗ್ರೆಸ್‌ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬೆಳಗ್ಗೆ 10.30ರ ಸಮಯಕ್ಕೆ ಕಾಂಗ್ರೆಸ್‌ 63 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಇನ್ನು ಕಾಮರೆಡ್ಡಿ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದ ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ತೀವ್ರ ಹಿನ್ನಡೆ ಅನುಭವಿಸಿದ್ದಾರೆ. ಇಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರೇವಂತ್‌ ರೆಡ್ಡಿ ಎದುರು ಕೆ ಚಂದ್ರಶೇಖರ್‌ ರಾವ್‌ ಹಿನ್ನಡೆ ಅನುಭವಿಸಿದ್ದಾರೆ. ಈ ಕ್ಷೇತ್ರ ಮಾತ್ರವಲ್ಲದೇ ಕೆಸಿಆರ್‌ ಕಣಕ್ಕಿಳಿದಿದ್ದ ಮತ್ತೊಂದು ಕ್ಷೇತ್ರ ಗೆಜ್ವಾಲ್‌ನಲ್ಲೂ ಹಿನ್ನಡೆ ಅನುಭವಿಸಿದ್ದಾರೆ. ಅಲ್ಲಿ ಬಿಜೆಪಿ ಅಭ್ಯರ್ಥಿ ಈಟಲ ರಾಜೇಂದರ್‌ ವಿರುದ್ಧ ಹಿನ್ನಡೆ ಅನುಭವಿಸಿದ್ದಾರೆ. ಕೆಸಿಆರ್ ಮಾತ್ರವಲ್ಲದೇ ಅವರ ಪುತ್ರ ಕೆಟಿ ರಾಮಾರಾವ್‌ ಸಹ ಹಿನ್ನಡೆ ಅನುಭವಿಸಿದ್ದಾರೆ. ಸಿರ್ಸಿಲಾ ಕ್ಷೇತ್ರದಲ್ಲಿ ಕೆಟಿಆರ್‌ ಸ್ಪರ್ಧಿಸಿದ್ದಾರೆ.

ಬೆಳಗ್ಗೆ 10.30 ರ ಸಮಯಕ್ಕೆ ತೆಲಂಗಾಣದಲ್ಲಿ ಎಲ್ಲಾ ಕ್ಷೇತ್ರಗಳ ಮೊದಲ ಸುತ್ತಿನ ಮತಎಣಿಕೆ ಮುಗಿದಿದ್ದು ಈ ಸಮಯಕ್ಕೆ ಕಾಂಗ್ರೆಸ್‌ 67, ಬಿಆರ್‌ಎಸ್‌ 45, ಬಿಜೆಪಿ 3, ಎಐಎಂಐಎಂ 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.

andolana

Recent Posts

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

27 mins ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

39 mins ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

6 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

7 hours ago