ಇಂದು ( ಡಿಸೆಂಬರ್ 3 ) ರಾಜಸ್ಥಾನ್, ತೆಲಂಗಾಣ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢ್ ಕ್ಷೇತ್ರಗಳ ವಿಧಾನಸಭೆಯ ಮತ ಎಣಿಕೆ ನಡೆಯುತ್ತಿದ್ದು, ನೆರೆಯ ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬೆಳಗ್ಗೆ 10.30ರ ಸಮಯಕ್ಕೆ ಕಾಂಗ್ರೆಸ್ 63 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಇನ್ನು ಕಾಮರೆಡ್ಡಿ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ತೀವ್ರ ಹಿನ್ನಡೆ ಅನುಭವಿಸಿದ್ದಾರೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ರೇವಂತ್ ರೆಡ್ಡಿ ಎದುರು ಕೆ ಚಂದ್ರಶೇಖರ್ ರಾವ್ ಹಿನ್ನಡೆ ಅನುಭವಿಸಿದ್ದಾರೆ. ಈ ಕ್ಷೇತ್ರ ಮಾತ್ರವಲ್ಲದೇ ಕೆಸಿಆರ್ ಕಣಕ್ಕಿಳಿದಿದ್ದ ಮತ್ತೊಂದು ಕ್ಷೇತ್ರ ಗೆಜ್ವಾಲ್‌ನಲ್ಲೂ ಹಿನ್ನಡೆ ಅನುಭವಿಸಿದ್ದಾರೆ. ಅಲ್ಲಿ ಬಿಜೆಪಿ ಅಭ್ಯರ್ಥಿ ಈಟಲ ರಾಜೇಂದರ್ ವಿರುದ್ಧ ಹಿನ್ನಡೆ ಅನುಭವಿಸಿದ್ದಾರೆ. ಕೆಸಿಆರ್ ಮಾತ್ರವಲ್ಲದೇ ಅವರ ಪುತ್ರ ಕೆಟಿ ರಾಮಾರಾವ್ ಸಹ ಹಿನ್ನಡೆ ಅನುಭವಿಸಿದ್ದಾರೆ. ಸಿರ್ಸಿಲಾ ಕ್ಷೇತ್ರದಲ್ಲಿ ಕೆಟಿಆರ್ ಸ್ಪರ್ಧಿಸಿದ್ದಾರೆ.
ಬೆಳಗ್ಗೆ 10.30 ರ ಸಮಯಕ್ಕೆ ತೆಲಂಗಾಣದಲ್ಲಿ ಎಲ್ಲಾ ಕ್ಷೇತ್ರಗಳ ಮೊದಲ ಸುತ್ತಿನ ಮತಎಣಿಕೆ ಮುಗಿದಿದ್ದು ಈ ಸಮಯಕ್ಕೆ ಕಾಂಗ್ರೆಸ್ 67, ಬಿಆರ್‌ಎಸ್ 45, ಬಿಜೆಪಿ 3, ಎಐಎಂಐಎಂ 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…