BREAKING NEWS

ನಿಮ್ಮ ಬಣದವರಿಗೆ ಸುಮ್ಮನಿರುವಂತೆ ಹೇಳಿ : ಸಿದ್ದರಾಮಯ್ಯಗೆ ಸುರ್ಜೇವಾಲ ಖಡಕ್ ಸೂಚನೆ

ಬೆಂಗಳೂರು : ಮುಖ್ಯಮಂತ್ರಿ ಅಧಿಕಾರಾವಧಿ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಹಂಚಿಕೆಯಾಗುವ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಸಚಿವ ಎಂ.ಬಿ. ಪಾಟೀಲ್ ಅವರು ಸಿದ್ದರಾಮಯ್ಯನವರೇ ಮುಂದಿನ ಐದು ವರ್ಷಗಳವರೆಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಬಣ ಹಾಗೂ ಡಿಕೆಶಿ ಬಣಗಳ ನಡುವಿನ ಹೊಸ ತಿಕ್ಕಾಟಕ್ಕೆ ಕಾರಣವಾಗಿದ್ದಾರೆ.

ಇದು ವಿಕೋಪಕ್ಕೆ ಹೋಗುತ್ತಲೇ ಕರ್ನಾಟಕದಲ್ಲಿ ಕಾಂಗ್ರೆಸ್ ಉಸ್ತುವಾರಿ ಹೊಂದಿರುವ ರಣದೀಪ್ ಸುರ್ಜೇವಾಲಾ, ನಿಮ್ಮ ಬಣದವರಿಗೆ ಸುಮ್ಮನಿರುವಂತೆ ಹೇಳಿ ಎಂದು ಖಡಕ್ ಸೂಚನೆ ನೀಡಿದ್ದಾರೆ.

ಸುರ್ಜೇವಾಲ ಹೇಳಿದ್ದಾದರೂ ಏನು? : ಸಿಎಂ ಹುದ್ದೆ ವಿಚಾರವಾಗಿ ನಿಮ್ಮ ಬಣದ ಸದಸ್ಯರುಗಳಿಗೆ ಸುಮ್ಮನಿರುವಂತೆ ಹೇಳಿ. ಸರ್ಕಾರ ರಚನೆಯಾದ ಹೊಸತರಲ್ಲೇ ಹೀಗೆಲ್ಲಾ ಮಾತನಾಡುವುದು ಸರಿಯಲ್ಲ. ಇದು ಸರ್ಕಾರದ ಮೇಲೆ ದುಷ್ಪರಿಣಾಮ ಬೀರುತ್ತದೆ. ನಾನು ಡಿಕೆಶಿಯವರ ಬಣಕ್ಕೆ ಸುಮ್ಮನಿರುವಂತೆ ಸೂಚಿಸುತ್ತೇನೆ. ಆದರೆ, ಅದಕ್ಕೂ ಮೊದಲು ನಿಮ್ಮ ಬಣಕ್ಕೆ ಸುಮ್ಮನಿರುವಂತೆ ಹೇಳಿ ಎಂದು ಸುರ್ಜೇವಾಲ, ಸಿದ್ದರಾಮಯ್ಯನವರಿಗೆ ಹೇಳಿದ್ದಾರೆ ಎಂದು ಕೆಲವು ಟಿವಿ ವಾಹಿನಿಗಳು ವರದಿ ಮಾಡಿವೆ.

ಈ ವಿವಾದಕ್ಕೆ ಮೂಲ ಕಾರಣವೇನು? : ಈ ವಿವಾದಕ್ಕೆ ಮೂಲ ಕಾರಣವಾಗಿದ್ದು ಎಂ.ಬಿ. ಪಾಟೀಲ್ ಅವರು ಮಾ. 22ರಂದು ನೀಡಿದ ಹೇಳಿಕೆ. ಮುಂದಿನ ಐದು ವರ್ಷದವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ. ಈ ಬಗ್ಗೆ ಹೈಕಮಾಂಡ್ ಮಟ್ಟದಲ್ಲೇ ಚರ್ಚೆಯಾಗಿದೆ. ಈ ವಿಚಾರ ಗೊತ್ತಿರುವುದು ಕೇವಲ ನಾಲ್ವರಿಗೆ ಮಾತ್ರ. ಅದು ವೇಣುಗೋಪಾಲ್, ಸುರ್ಜೇವಾಲ, ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಯವರಿಗೆ ಮಾತ್ರ \ ಎಂದು ಎಂ.ಬಿ ಪಾಟೀಲ್ ಹೇಳಿದ್ದರು. ಅಲ್ಲದೆ, ಅಧಿಕಾರ ಹಂಚಿಕೆ ವಿಚಾರ ಈಗ ಅಪ್ರಸ್ತುತ ಹಾಗಾಗಿ, ಸಿದ್ದರಾಮಯ್ಯನವರೇ ಐದು ವರ್ಷಗಳವರೆಗೆ ಸಿಎಂ ಆಗಿರುತ್ತಾರೆ ಎಂದು ಹೇಳಿದ್ದರು.

ಇದರ ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ ಕೂಡ ಹೇಳಿಕೆ ನೀಡಿ, ಸಿದ್ದರಾಮಯ್ಯನವರೇ ಮುಂದೆ ಐದು ವರ್ಷಗಳವರೆಗೆ ಸಿಎಂ ಆಗಿರುತ್ತಾರೆ. ಇದರಲ್ಲಿ ಯಾವ ಸಂದೇಹವೂ ಇಲ್ಲ ಎಂದು ಹೇಳಿದ್ದರು. ಇದು ಕಾಂಗ್ರೆಸ್ ನಲ್ಲಿ ಹೊಸತೊಂದು ಕಿಚ್ಚು ಹೊತ್ತಿಸಿತು.

“ಎಂ.ಬಿ ಪಾಟೀಲರ ಹೇಳಿಕೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದ ರಾಜ್ಯ ಬಿಜೆಪಿ ಘಟಕ, ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗುವುದು ಇಲ್ಲ, ಅವರನ್ನು ಆಗಲು ಸಿದ್ದರಾಮಯ್ಯನವರು ಬಿಡುವುದು ಇಲ್ಲ. ಎಂ.ಬಿ. ಪಾಟೀಲರ ಈ ಹೇಳಿಕೆಯ ಮೂಲಕ ಡಿ.ಕೆ. ಶಿವಕುಮಾರ್, ಅವರಿಗೆ ನೇರವಾದ ಎಚ್ಚರಿಕೆಯನ್ನು ರವಾನಿಸಿದ್ದಾರಷ್ಟೇ!’’ ಎಂದು ಹೇಳಿತ್ತು.

“ಅದೇನೆ ಇದ್ದರೂ ಬಹುಮತ ದೊರಕಿದ ನಂತರದ ಈವರೆಗಿನ ಎಲ್ಲ ಬೆಳವಣಿಗೆಗಳನ್ನು ಗಮನಿಸಿದಾಗ, ಈ ಸರಕಾರ ಸುಸ್ತಿರವಾಗಿರಲಿದೆ ಎಂಬ ಯಾವ ಲಕ್ಷಣವೂ ಕಾಣುತ್ತಿಲ್ಲ, ಗ್ಯಾರಂಟಿಯೂ ಇಲ್ಲ. ದೆಹಲಿಯ ತಮ್ಮ ಹೈಕಮಾಂಡಿಗೆ ಕಪ್ಪ ಪೂರೈಸಬೇಕಾದ ಏಕೈಕ ಮಾನದಂಡದಲ್ಲಿ ಈ ಎಟಿಎಂ ಸರ್ಕಾರ ರಚನೆಯಾಗಿರುವುದು ಮತ್ತು ಅದಷ್ಟೇ ಇದರ ಆದ್ಯತೆಯಾಗಿರುವುದು ರಾಜ್ಯದ ದುರಂತ!’’ ಎಂದು ಹೇಳಿತು.

ಇದು ಕಿಚ್ಚು ಹೊತ್ತಿಸಿತು. ಡಿಕೆಶಿ ಬಣದ ಅಸಮಾಧಾನಕ್ಕೆ ಕಾರಣವಾಯಿತು. ಇದು ಬಿಸಿಬಿಸಿ ಚರ್ಚೆಯಾಗಲು ಶುರುವಾಗುತ್ತಿದ್ದಂತೆ, ಮಂಗಳವಾರ ಮೈಸೂರಿನಲ್ಲಿ ಸ್ಪಷ್ಟನೆ ನೀಡಿದ ಎಂಬಿ ಪಾಟೀಲ್, ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಹೈಕಮಾಂಡ್ ನೀಡಿರುವ ಹೇಳಿಕೆಯನ್ನೇ ನಾನು ಹೇಳಿದ್ದೇನೆ. ದೆಹಲಿಯಲ್ಲಿ ಸಿದ್ದರಾಮಯ್ಯ ಹೆಸರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಹೆಸರಿಸುವಾಗ ಪತ್ರಕರ್ತರು ಯಾರು ಎಷ್ಟು ವರ್ಷ ಸಿಎಂ ಹುದ್ದೆಯಲ್ಲಿರುತ್ತಾರೆ ಎಂದು ಕೇಳಿದ್ದರು. ಆಗ, ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ವೇಣುಗೋಪಾಲ್, ಸಿದ್ದು ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಅಷ್ಟೇ ಎಂದು ಸೂಚ್ಯವಾಗಿ ಹೇಳಿದ್ದರು. ಅವರು ಹೇಳಿದ್ದನ್ನೇ ನಾನು ಹೇಳಿದ್ದೇನೆ ಎಂದರು ಎಂಬಿ ಪಾಟೀಲ್.

lokesh

Recent Posts

ಓದುಗರ ಪತ್ರ: ಕೆರೆ, ಕಟ್ಟೆಗಳ ಹೂಳೆತ್ತಿಸಿ

ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ…

22 mins ago

ಓದುಗರ ಪತ್ರ: ಪ್ರಜಾಪ್ರಭುತ್ವ ಎಂಬ ಮೃಷ್ಟಾನ್ನ ಭೋಜನ ಶಾಲೆ!

ಭ್ರಷ್ಟಾಚಾರವೇ ಇಲ್ಲದ ವ್ಯವಸ್ಥೆ ನಿರ್ಮಾಣ ಮಾಡುವುದು ಇನ್ನು ತುಂಬಾ ಕಷ್ಟಕರವಾದ ಕೆಲಸ ಎಂದು ನಿವೃತ್ತ ಲೋಕಾಯುಕ್ತ ನ್ಯಾಯ ಮೂರ್ತಿ ಎನ್.ಸಂತೋಷ್…

24 mins ago

ಓದುಗರ ಪತ್ರ: ಡಿಜಿಟಲ್ ತಂತ್ರಜ್ಞಾನ ಸದ್ಬಳಕೆಯಾಗಲಿ

ಇಂದು ಡಿಜಿಟಲ್ ತಂತ್ರಜ್ಞಾನ ಹೆಚ್ಚಾಗಿ ಬಳಕೆಯಾಗುತ್ತಿದ್ದು, ಇದರಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಆನ್ಲೈನ್ ತರಗತಿಗಳು, ಯೂಟ್ಯೂಬ್ ಶಿಕ್ಷಣ…

26 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಪೈರೆಸಿ ವಿರುದ್ಧ ಚಿತ್ರೋದ್ಯಮ ಯುದ್ಧ ಸನ್ನದ್ಧ!?

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ೨೦೨೬ರ ಆರಂಭದ ವೇಳೆ ಹಲವು ಬೆಳವಣಿಗೆಗಳು. ೨೦೨೫ರ ಕೊನೆಯ ಶುಕ್ರವಾರ ತೆರೆ ಕಂಡ ೨ ಚಿತ್ರಗಳ…

29 mins ago

ಸಿದ್ದಾಪುರ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣ

ಕೃಷ್ಣ ಸಿದ್ದಾಪುರ ಸಿಬ್ಬಂದಿ ಕೊರತೆ, ಜನಸಂಖ್ಯೆ ಆಧಾರದಲ್ಲಿ ಹೊಸ ಠಾಣೆ ಸ್ಥಾಪನೆ, ಹೆಚ್ಚಿನ ಸಿಬ್ಬಂದಿ ನಿಯೋಜನೆಗೆ ಆಗ್ರಹ  ಸಿದ್ದಾಪುರ:ಸಿದ್ದಾಪುರ ಪೊಲೀಸ್…

34 mins ago

ಮೈಮುಲ್ ಆಡಳಿತ ಮಂಡಳಿ ಚುನಾವಣೆಯತ್ತ ಎಲ್ಲರ ಚಿತ್ತ

ಕೆ.ಬಿ.ರಮೇಶನಾಯಕ ಮೈಸೂರು: ಮೈಸೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ಮೈಮುಲ್) ಆಡಳಿತ ಮಂಡಳಿಯ ಐದು ವರ್ಷಗಳ ಆಡಳಿತ ಮುಂದಿನ…

39 mins ago