BREAKING NEWS

ಭೀಕರ ಅಪಘಾತ : 11 ಜನರ ದುರ್ಮರಣ

ಜೈಪುರ : ಬಸ್‍ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 11 ಜನ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಭರತ್‍ಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬಸ್ ರಾಜಸ್ಥಾನದ ಪುಷ್ಕರ್‌ನಿಂದ ಉತ್ತರ ಪ್ರದೇಶದ ವೃಂದಾವನಕ್ಕೆ ತೆರಳುತ್ತಿತ್ತು. ಈ ವೇಳೆ ಡೀಸೆಲ್ ಖಾಲಿಯಾಗಿ ಲಖನ್‍ಪುರದ ಅಂಟ್ರಾ ಫ್ಲೈಓವರ್‌ನ ಮಧ್ಯದಲ್ಲಿ ನಿಂತಿದೆ. ಈ ವೇಳೆ ವೇಗವಾಗಿ ಬಂದ ಟ್ರಕ್ ಬಸ್‍ಗೆ ಡಿಕ್ಕಿಯಾಗಿದೆ. ಪರಿಣಾಮ 11 ಜನ ಸಾವಿಗೀಡಾಗಿದ್ದಾರೆ. ಅಲ್ಲದೇ 12 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಮುಂಜಾನೆ 4:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರಲ್ಲಿ ಐವರು ಪುರುಷರು ಹಾಗೂ ಆರು ಜನ ಮಹಿಳೆಯರು ಎಂದು ತಿಳಿದು ಬಂದಿದೆ. ಗಾಯಗೊಂಡವರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರೆಲ್ಲ ಗುಜರಾತ್‍ನಿಂದ ಪ್ರವಾಸಕ್ಕೆ ಬಂದಿದ್ದರು ಎಂದು ತಿಳಿದು ಬಂದಿದೆ. ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಎಕ್ಸ್‍ನಲ್ಲಿ ಮೃತರ ಆತ್ಮಕ್ಕೆ ಶಾಂತಿ ಕೋರಿ, ಅವರ ಕುಟುಂಬಕ್ಕೆ ದೈರ್ಯ ನೀಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

lokesh

Recent Posts

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌

ರಾಮನಗರ: ರಾಮನಗರದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌ ಎಸಗಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಕಾಸ್‌, ಪ್ರಶಾಂತ್‌, ಚೇತನ್‌…

35 seconds ago

ಚಾಮರಾಜನಗರ| ಕಾಡಾನೆ ದಾಳಿ: ವ್ಯಕ್ತಿ ಸಾವು

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್‌ನಲ್ಲಿ…

37 mins ago

ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ: ಬಿ.ವೈ.ವಿಜಯೇಂದ್ರ ಲೇವಡಿ

ಬೆಳಗಾವಿ: ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ.…

41 mins ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಕುವೆಂಪು ನಗರದ ಅಪೋಲೋ ಆಸ್ಪತ್ರೆಯ ಹಿಂಭಾಗ ದಲ್ಲಿರುವ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎದುರಿನ ದೊಡ್ಡಮೋರಿ ಯಿಂದ ತೆಗೆದ ಕಸವನ್ನು…

1 hour ago

ಓದುಗರ ಪತ್ರ: ರೈತರ ಆತ್ಮಹತ್ಯೆ ತಡೆಗೆ ಕ್ರಮ ಕೈಗೊಳ್ಳಿ

ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ)…

1 hour ago

ಓದುಗರ ಪತ್ರ: ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡಿ

ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ…

2 hours ago