ಚನ್ನಪಟ್ಟಣ : ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾ ಬಳಿ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಶನಿವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ನೂತನ ಬೆಂಗಳೂರು ಮೈಸೂರು ದಶಪಥ ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು, ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಇನ್ನೊವಾ ಕಾರು ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಪಕ್ಕದ ರಸ್ತೆಯಲ್ಲಿ ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಮೂವರು (ತಂದೆ ಹಾಗೂ ಇಬ್ಬರು ಮಕ್ಕಳು) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಅತಿವೇಗದ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದಲ್ಲಿ ಮೃತಪಟ್ಟವರು ಟಿ.ನರಸೀಪುರ ಮೂಲದವರು ಎಂದು ಹೇಳಲಾಗುತ್ತಿದೆ. ಈ ಕುರಿತು ಪೊಲೀಸರು ಇನ್ನಷ್ಟೇ ಅಧಿಕೃತ ಹೇಳಿಕೆ ನೀಡಬೇಕಿದೆ. ಸ್ಥಳಕ್ಕೆ ಚನ್ನಪಟ್ಟಣ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೆಎಸ್‌ಆರ್‌ಟಿಸಿ ಬಸ್ ಕಣಿಮಿಣಿಕೆ ಬಳಿ ಟೋಲ್ ಕಟ್ಟುವುದನ್ನು ತಪ್ಪಿಸಲು ಹೋಗಿ ಬೈಕ್ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಕಳೆದ ತಿಂಗಳು ಸಂಭವಿಸಿತ್ತು. ಹಿಂಬದಿ ಸವಾರ ಗಾಯಗೊಂಡಿದ್ದರು. ಈ ಕಹಿ ಘಟನೆಯ ನೆನಪು ಮಾಸುವ ಮುನ್ನವೇ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…
ಮಧುಕರ ಎಮ್.ಎಲ್. ಯಳಂದೂರಿನಲ್ಲೊಂದು ಅಪರೂಪದ ಜೋಡಿ ಅದು ಬೇಸಿಗೆ ಕಾಲ, ಬೆಳಗಿನ ವೇಳೆಯಲ್ಲಿ ವಾಕಿಂಗ್ ಮಾಡುವ ಜನರ ಸಂಖ್ಯೆ ಹೆಚ್ಚು,…
ಪ್ರಕಾಶ್ ಪುಟ್ಟಪ್ಪ ಸುತ್ತಮುತ್ತ ಹಳ್ಳಿಗಳಿಗೆಲ್ಲ ಸೋಬಾನೆ ಮಾಳಗರಸಮ್ಮ ಎಂದೇ ಪ್ರಖ್ಯಾತಿ ಗಳಿಸಿರೋ ಈ ಹಿರಿ ತಾಯಿಯ ವೈಯಕ್ತಿಕ ಬದುಕು ನಿಜಕ್ಕೂ…
ಕೆ.ಎಸ್.ಚಂದ್ರಶೇಖರ್‌ಮೂರ್ತಿ ಅರಮನೆಯಿಂದ ಪಂಜಿನ ಕವಾಯತುವರೆಗೂ ಅಂಗೈಯ ವೀಕ್ಷಣೆಗೆ ಅವಕಾಶ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ೨೦೨೬ರ ವರ್ಷದಲ್ಲಿ ಹತ್ತು ಹಲವು…