ಬೆಂಗಳೂರು : ಕಾರು ಹಾಗೂ ಲಾರಿ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ತಾಯಿ ಮತ್ತು ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಹೊರವಲಯದ ನೈಸ್ ರಸ್ತೆಯಲ್ಲಿ ನಡೆದಿದೆ.
ಬೆಳಗ್ಗಿನ ಜಾವ ಸುಮಾರು ನಾಲ್ಕು ಘಂಟೆಯ ವೇಳೆಗೆ ಘಟನೆ ನಡೆದಿದೆ. ಪತಿ ಮಹೇಂದ್ರನ್, ಪತ್ನಿ ಸಿಂಧು ಮತು ಅವರ ಎರಡು ಮಕ್ಕಳು ಟಾಟಾ ನೆಕ್ಸಾನ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ಸಂದರ್ಭ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಸಂಪೂರ್ಣ ಸುಟ್ಟು ಕರಕಲಾಗಿದೆ.
ಘಟನೆಯಿಂದ ಪತ್ನಿ ಸಿಂಧು, ಎರಡು ವರ್ಷದ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಪತಿ ಮಹೇಂದ್ರನ್ ಮತ್ತು ಇನ್ನೊಂದು ಮಗುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ತಲಘಟ್ಟಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.