BREAKING NEWS

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ : ತಾಯಿ, ಮಗು ಸ್ಥಳದಲ್ಲೇ ಸಾವು

ಬೆಂಗಳೂರು : ಕಾರು ಹಾಗೂ ಲಾರಿ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ತಾಯಿ ಮತ್ತು ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಹೊರವಲಯದ ನೈಸ್ ರಸ್ತೆಯಲ್ಲಿ ನಡೆದಿದೆ.

ಬೆಳಗ್ಗಿನ ಜಾವ ಸುಮಾರು ನಾಲ್ಕು ಘಂಟೆಯ ವೇಳೆಗೆ ಘಟನೆ ನಡೆದಿದೆ. ಪತಿ ಮಹೇಂದ್ರನ್, ಪತ್ನಿ ಸಿಂಧು ಮತು ಅವರ ಎರಡು ಮಕ್ಕಳು ಟಾಟಾ ನೆಕ್ಸಾನ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ಸಂದರ್ಭ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಸಂಪೂರ್ಣ ಸುಟ್ಟು ಕರಕಲಾಗಿದೆ.

ಘಟನೆಯಿಂದ ಪತ್ನಿ ಸಿಂಧು, ಎರಡು ವರ್ಷದ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಪತಿ ಮಹೇಂದ್ರನ್ ಮತ್ತು ಇನ್ನೊಂದು ಮಗುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ತಲಘಟ್ಟಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

lokesh

Recent Posts

ಮೈಸೂರು ಕರಗ ; ಅದ್ದೂರಿ ಮೆರವಣಿಗೆ

ಮೈಸೂರು : ನಗರದಲ್ಲಿ ಮಿನಿ ದಸರಾ ಎಂದೇ ಪ್ರಸಿದ್ಧಿ ಪಡೆದಿರುವ, ಸಾಂಸ್ಕೃತಿಕ ನಗರಿ ಮೈಸೂರಿನ ಮೆರುಗು ಹೆಚ್ಚಿಸಿರುವ ಆಚರಣೆಗಳಲ್ಲಿ ಮೈಸೂರು…

37 mins ago

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

9 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

13 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

13 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

13 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

13 hours ago