BREAKING NEWS

ಭೀಕರ ಅಪಘಾತ : ಮೀಸಲು ಪಡೆ ಪೇದೆಗಳಿಬ್ಬರ ದುರ್ಮರಣ

ಮೈಸೂರು : ಭಾನುವಾರ ರಾತ್ರಿ ನಗರದ ಲಲಿತಮಹಲ್ ಹೋಟೆಲ್ ಸಮೀಪದ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ರಾಜ್ಯ ಮೀಸಲು ಪೊಲೀಸ್ ಪಡೆಯ ಇಬ್ಬರು ಪೇದೆಗಳು ಸಾವಿಗೀಡಾಗಿದ್ದಾರೆ.
ರಾಜ್ಯ ಮೀಸಲು ಪೊಲೀಸ್ ಪಡೆಗೆ ಸೇರಿದ ಮೈಸೂರಿನ 5ನೇ ಬಟಾಲಿಯನ್ ನ ಪೇದೆಗಳಾದ ಮೈಸೂರಿನ ಕುಂಬಾರಕೊಪ್ಪಲು ಬಡಾವಣೆ ನಿವಾಸಿ ಪಿ.ಮಹೇಶ್ (23) ಹಾಗೂ ಬಿಜಾಪುರ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಅಮರನಾಥ ತಾಳಿಕೋಟೆ (24) ಮೃತಪಟ್ಟವರು.

ನಗರದ ಸಿದ್ದಾರ್ಥ ಬಡಾವಣೆ ಸಮೀಪದ ಫುಡ್ ಸ್ಟ್ರೀಟ್ ನಲ್ಲಿ ಊಟ ಸೇವಿಸಿದ ಬಳಿಕ ತಮ್ಮ ಪಲ್ಸರ್ ಬೈಕಿನಲ್ಲಿ ಕೆಎಸ್ ಆರ್ ಪಿ ಬಟಾಲಿಯನ್ ಕೇಂದ್ರದತ್ತ ತೆರಳುತ್ತಿದ್ದ ವೇಳೆ ಎದುರುಗಡೆಯಿಂದ ವೇಗವಾಗಿ ಬಂದ ಮಹೀಂದ್ರ ಥಾರ್ ವಾಹನ ಪೇದೆಗಳಿದ್ದ ಬೈಕಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಪಲ್ಸರ್ ಬೈಕ್ ಸುಮಾರು ಹತ್ತು ಮೀಟರ್ ದೂರ ಹೋಗಿ ಬಿದ್ದಿದ್ದರೆ, ಇಬ್ಬರೂ ಪೇದೆಗಳು ಮೇಲೆಕ್ಕೆ ಎಗರಿ ನೆಲಕ್ಕೆ ಅಪ್ಪಳಿಸಿದ್ದಾರೆ. ಇದರಿಂದಾಗಿ ಇಬ್ಬರ ತಲೆಗೆ ತೀವ್ರ ಸ್ವರೂಪದ ಪೆಟ್ಟಾಗಿ ರಕ್ತಸ್ರಾವವಾಗಿ ಸ್ಥಳದಲ್ಲೇ ಅಸುನೀಗಿದ್ದಾರೆ.

ಘಟನೆ ಬಳಿಕ ಅಪಘಾತ ನಡೆಸಿದ ಮಹೀಂದ್ರ ಥಾರ್ ವಾಹನ ಸವಾರ ತನ್ನ ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ, ಅಷ್ಟರಲ್ಲಿ ಎಚ್ಚೆತ್ತುಕೊಂಡ ಸಾರ್ವಜನಿಕರು ಆತನ‌ ವಾಹನ ಬೆನ್ನತ್ತಿ ಆಲನಹಳ್ಳಿ ಸಮೀಪದ ರಿಂಗ್ ರಸ್ತೆ ಬಳಿ ವಾಹನಕ್ಕೆ ಅಡ್ಡಲಾಗಿ ನಿಂತು ತಡೆದು ಆರೋಪಿಯನ್ನು ಹಿಡಿದಿದ್ದಾರೆ.

ನಂತರ ವಿಚಾರ ತಿಳಿದ ಸಿದ್ದಾರ್ಥನಗರ ಸಂಚಾರಿ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.

ಇಬ್ಬರೂ ಪೇದೆಗಳ ಮರಣೋತ್ತರ ಪರೀಕ್ಷೆ ಸೋಮವಾರ ಬೆಳಗ್ಗೆ ಕೆ.ಆರ್.ಆಸ್ಪತ್ರೆಯ ಶವಾಗಾರದಲ್ಲಿ ನಡೆದ ಬಳಿಕ ಸರ್ಕಾರಿ ಗೌರವ ಸಲ್ಲಿಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು.

ಅಮರನಾಥ ಅವರ ಮೃತದೇಹವನ್ನು ಆಂಬ್ಯುಲೆನ್ಸ್ ಮೂಲಕ ಜಮಖಂಡಿಗೆ ಕಳುಹಿಸಲಾಗಿದ್ದು, ಇದಕ್ಕಾಗಿ ಓರ್ವ ಇನ್ಸ್‌ಪೆಕ್ಟರ್ ಹಾಗೂ ಇಬ್ಬರು ಸಿಬ್ಬಂದಿಯನ್ನು ಕಳುಹಿಸಿಕೊಡಲಾಗಿದೆ ಎಂದು ರಾಜ್ಯ ಮೀಸಲು ಪೊಲೀಸ್ ಪಡೆಗೆ 5ನೇ ಬಟಾಲಿಯನ್ ಕಮಾಂಡೆಂಟ್ ಜನಾರ್ದನ್ ತಿಳಿಸಿದ್ದಾರೆ.

ಮಹೇಶ್ ಅವರ ಅಂತ್ಯಕ್ರಿಯೆ ಸೋಮವಾರ ಸಂಜೆ ನಡೆಯಿತು. ಅಮರನಾಥ್ ತಾಳೀಕೋಟೆ ಅವರ ಅಂತ್ಯಕ್ರಿಯೆ ಮಂಗಳವಾರ ನಡೆಯಲಿದೆ.

lokesh

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

13 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

14 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago