BREAKING NEWS

ನೇಪಾಳದಲ್ಲಿ ಭೀಕರ ಭೂಕಂಪ : 70 ಮಂದಿ ದುರ್ಮರಣ

ಕಠ್ಮಂಡು : ನೇಪಾಳದಲ್ಲಿ ಸಂಭವಿಸಿದ ಪ್ರಬಲ ಭೂಕಂಪನಕ್ಕೆ 70 ಮಂದಿ ಬಲಿಯಾಗಿದ್ದಾರೆ. ನೂರಾರು ಮಂದಿಗೆ ಗಾಯಗಳಾಗಿವೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 6.4ರಷ್ಟು ದಾಖಲಾಗಿದೆ.

ಕಟ್ಟಡಗಳು ಉರುಳಿದ್ದು, ಮನೆಗಳ ಗೋಡೆಗಳು ಬಿರುಕುಬಿಟ್ಟಿದೆ. ಧರೆಗುರುಳಿದ ಕಟ್ಟಡದ ಅವಶೇಷಗಳಡಿ ನೂರಾರು ಮಂದಿ ಸಿಲುಕಿರುವ ಸಾಧ್ಯತೆ ಇದೆ. ನೇಪಾಳದ ರುಕುಂ ವೆಸ್ಟ್ ಪ್ರದೇಶದಲ್ಲಿ 36 ಮಂದಿ, ಜಾಜರ್‍ಕೋಟ್ ಪ್ರದೇಶದಲ್ಲಿ 34 ಮಂದಿ ಮೃತಪಟ್ಟಿದ್ದಾರೆ. ಸಾವು-ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಳ ಆಗುವ ಸಂಭವ ಇದೆ.

ಭಾರತದ ಹಲವು ರಾಜ್ಯಗಳಲ್ಲೂ ಭೂಮಿ ಕಂಪಿಸಿದೆ. ಬಿಹಾರ, ಜಾರ್ಖಂಡ್, ಉತ್ತರಾಖಂಡ್ ಸೇರಿ ಹಲವೆಡೆ ಭೂಮಿ ನಡುಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 1ತಿಂಗಳಲ್ಲಿ 3ನೇ ಬಾರಿಗೆ ಭೂಮಿ ಕಂಪಿಸಿದೆ.

 

lokesh

Recent Posts

ಬಳ್ಳಾರಿ ಘರ್ಷಣೆ | ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ ; ಬಿವೈವಿ ಆಗ್ರಹ

ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…

17 mins ago

ಬಳ್ಳಾರಿ ಘರ್ಷಣೆ | ಕೈ ಕಾರ್ಯಕರ್ತ ಸಾವು, ಘಟನೆ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ  ಬ್ಯಾನರ್‌ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್‌ ಆಗಿ…

1 hour ago

ಫೆ.23ಕ್ಕೆ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಲೋಕಾರ್ಪಣೆ : ಪ್ರಧಾನಿ ಮೋದಿ ಭಾಗಿ

ಬೆಂಗಳೂರು : ಬಾಲಗಂಗಾಧರನಾಥ ಶ್ರೀಗಳ ಧಾರ್ಮಿಕ ಗದ್ದುಗೆ ಲೋಕಾರ್ಪಣೆ ಹಾಗೂ ಡಾ.ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ…

2 hours ago

ಸ್ವಜಾತಿ ಪಕ್ಷಪಾತ ಬೇಡ ; ಜಾತ್ಯಾತೀತವಾಗಿ ಕಾರ್ಯ ನಿರ್ವಹಿಸಿ : ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು : ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಬಳ್ಳಾರಿ ಬ್ಯಾನರ್‌ ಘರ್ಷಣೆ | ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಎಫ್‌ಐಆರ್‌

ಬಳ್ಳಾರಿ : ವಾಲ್ಮೀಕಿ ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ ಸಂಜೆ ನಡೆದ ಘರ್ಷಣೆ…

4 hours ago

ಓದುಗರ ಪತ್ರ: ಕೆರೆ, ಕಟ್ಟೆಗಳ ಹೂಳೆತ್ತಿಸಿ

ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ…

8 hours ago