ಕಠ್ಮಂಡು : ನೇಪಾಳದಲ್ಲಿ ಸಂಭವಿಸಿದ ಪ್ರಬಲ ಭೂಕಂಪನಕ್ಕೆ 70 ಮಂದಿ ಬಲಿಯಾಗಿದ್ದಾರೆ. ನೂರಾರು ಮಂದಿಗೆ ಗಾಯಗಳಾಗಿವೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 6.4ರಷ್ಟು ದಾಖಲಾಗಿದೆ.
ಕಟ್ಟಡಗಳು ಉರುಳಿದ್ದು, ಮನೆಗಳ ಗೋಡೆಗಳು ಬಿರುಕುಬಿಟ್ಟಿದೆ. ಧರೆಗುರುಳಿದ ಕಟ್ಟಡದ ಅವಶೇಷಗಳಡಿ ನೂರಾರು ಮಂದಿ ಸಿಲುಕಿರುವ ಸಾಧ್ಯತೆ ಇದೆ. ನೇಪಾಳದ ರುಕುಂ ವೆಸ್ಟ್ ಪ್ರದೇಶದಲ್ಲಿ 36 ಮಂದಿ, ಜಾಜರ್‍ಕೋಟ್ ಪ್ರದೇಶದಲ್ಲಿ 34 ಮಂದಿ ಮೃತಪಟ್ಟಿದ್ದಾರೆ. ಸಾವು-ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಳ ಆಗುವ ಸಂಭವ ಇದೆ.
ಭಾರತದ ಹಲವು ರಾಜ್ಯಗಳಲ್ಲೂ ಭೂಮಿ ಕಂಪಿಸಿದೆ. ಬಿಹಾರ, ಜಾರ್ಖಂಡ್, ಉತ್ತರಾಖಂಡ್ ಸೇರಿ ಹಲವೆಡೆ ಭೂಮಿ ನಡುಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 1ತಿಂಗಳಲ್ಲಿ 3ನೇ ಬಾರಿಗೆ ಭೂಮಿ ಕಂಪಿಸಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…