BREAKING NEWS

ಭಯೋತ್ಪಾದಕರ ಪ್ರಕರಣ ಸಿಸಿಬಿ ತನಿಖೆಗೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಭಯೋತ್ಪಾದಕರ ಪ್ರಕರಣವನ್ನು ಸಿಸಿಬಿ ತನಿಖೆಗೆ ವಹಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಬಿಜೆಪಿ, ಜೆಡಿಎಸ್‍ನ ಸದಸ್ಯರ ಗದ್ದಲದ ನಡುವೆಯೂ ಸ್ವಯಂಪ್ರೇರಿತವಾಗಿ ಮಹತ್ವದ ಹೇಳಿಕೆ ನೀಡಿದ ಗೃಹ ಸಚಿವರು ಸಿಸಿಬಿ ಪೊಲೀಸರ ಕಾರ್ಯಾಚರಣೆಯನ್ನು ಶ್ಲಾಘಿಸಿದರು.

ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದ ಪೊಲೀಸರು ಐವರು ಶಂಕಿತರನ್ನು ಬಂಸಿದ್ದಾರೆ.

ಸದರಿ ಆರೋಪಿಗಳು ಹಲವು ದಿನಗಳಿಂದಲೂ ಶಸ್ತ್ರಾಸ್ತ್ರ, ಮದ್ದುಗುಂಡು, ಸಲಕರಣೆ ಸೇರಿದಂತೆ ಹಲವಾರು ವಸ್ತುಗಳನ್ನು ಸಂಗ್ರಹಿಸಿ ದೇಶದ ಐಕ್ಯತೆ, ಸಾರ್ವಭೌಮತ್ವಕ್ಕೆ ಧಕ್ಕೆ ತರುವ ವಿಧ್ವಂಸಕ ಕೃತ್ಯವಾದ ಭಯೋತ್ಪಾದನಾ ಚಟುವಟಿಕೆಯಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ.

ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಸಿದ್ದಾರೆ. ಇವರುಗಳಿಂದ 7 ನಾಡ ಪಿಸ್ತೂಲುಗಳು, 45 ಜೀವಂತ ಗುಂಡು, ವಾಕಿಟಾಕಿ, 12 ಮೊಬೈಲ್ ಸೇರಿದಂತೆ ಹಲವಾರು ಆಕ್ಷೇಪಾರ್ಹ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿವರಿಸಿದರು.

ಈ ಆರೋಪಿಗಳು ಜೈಲಿನಲ್ಲಿರುವ ಖೈದಿಗಳ ಜೊತೆ ಸಂಪರ್ಕದಲ್ಲಿರುವುದು ಪತ್ತೆಯಾಗಿದೆ. ಶಾಂತಿ ಸುವ್ಯವಸ್ಥೆಗೆ ಭಂಗ ತರುವಂತ ವಿಧ್ವಂಸಕ ಕೃತ್ಯ ನಡೆಸುವ ಸಂಚಿನಲ್ಲಿ ಭಾಗಿಯಾಗಿದ್ದರು. ಈ ಹಿಂದೆ ಹಲವಾರು ಕೊಲೆ, ಸುಲಿಗೆ ಪ್ರಕರಣಗಳಲ್ಲೂ ತೊಡಗಿಸಿಕೊಂಡಿದ್ದರು. ದೇಶದ್ರೋಹಿ ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿದ್ದ ಈ ಆರೋಪಿಗಳನ್ನು ಹೆಬ್ಬಾಳ ಪೆÇಲೀಸ್ ಠಾಣಾ ಪೆÇಲೀಸರು ಬಂಸುವ ಮೂಲಕ ಸಂಭವನೀಯ ದಾಳಿಯನ್ನು ತಡೆದಿದ್ದಾರೆ ಎಂದರು.

ಸದರಿ ಆರೋಪಿಗಳು ನಿಷೇತ ಭಯೋತ್ಪಾದಕ ಸಂಘಟನೆಗಳ ಜೊತೆ ಸಂಪರ್ಕದಲ್ಲಿರುವುದು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಲು ಅನುಸರಿಸಿದ ಮಾರ್ಗಗಳು ಹಾಗೂ ಯಾವ ರೀತಿಯ ವಿಧ್ವಂಸಕ ಕೃತ್ಯವನ್ನು ನಡೆಸಲು ಸಂಚು ರೂಪಿಸಿದ್ದರು ಎಂಬ ವಿಚಾರಗಳ ತನಿಖೆಗೆ ಪ್ರಕರಣವನ್ನು ಸಿಸಿಬಿ ತನಿಖೆಗೆ ಒಪ್ಪಿಸಿರುವುದಾಗಿ ತಿಳಿಸಿದರು.

andolanait

Recent Posts

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

6 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

6 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

6 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

6 hours ago

ಪರಿಸರ ಸ್ನೇಹಿ ಸಮಾಜ ಮನೆಯಿಂದಲೇ ಆರಂಭವಾಗಲಿ

ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…

6 hours ago

ಮತ್ತೊಮ್ಮೆ ನ್ಯಾಯಾಲಯದತ್ತ ಮಲ್ಟಿಪ್ಲೆಕ್ಸ್ ಸಂಘಟನೆ, ಇತರರು

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…

6 hours ago