6 ತಿಂಗಳಿಗೆ ಒಮ್ಮೆ ಟಿಇಟಿ: ಸಚಿವ ಬಿ.ಸಿ.ನಾಗೇಶ್‌

ತುಮಕೂರು: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯನ್ನು ಆರು ತಿಂಗಳಿಗೆ ಒಮ್ಮೆ ನಡೆಸಲು ಚಿಂತನೆಯಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಆರು ತಿಂಗಳಿಗೆ ಒಮ್ಮೆ ನಿಗದಿತ ದಿನಾಂಕದಂದು ನಡೆಸಿದರೆ ಹೆಚ್ಚಿನ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಅನುಕೂಲವಾಗುತ್ತದೆ ಎಂದು ಹೇಳಿದರು.

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಈ ಬಗ್ಗೆ ಯಾವುದೇ ಗೊಂದಲ ಬೇಡ. ರಾಜ್ಯದಲ್ಲಿ ಸುಮಾರು 35 ಸಾವಿರದಿಂದ 40 ಸಾವಿರ ಶಿಕ್ಷಕರು ವರ್ಗಾವಣೆಯಾಗಲಿದ್ದು, ಶಿಕ್ಷಕರು ಬಯಸಿದ ಸ್ಥಳಕ್ಕೆ ವರ್ಗಾವಣೆ ಮಾಡಿಕೊಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

× Chat with us