ಬೆಂಗಳೂರು : ಕಳೆದ ಎರಡು ವರ್ಷಗಳಿಂದಲೂ ಸಾಹಿತಿಗಳಿಗೆ ಜೀವ ಬೆದರಿಕೆ ಹಾಕುತ್ತಿದ್ದ ಆರೋಪಿ ಶಿವಾಜಿರಾವ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ರಾಜ್ಯದ ಸಾಹಿತಿಗಳಾದ ಬಂಜಗೆರೆ ಜಯಪ್ರಕಾಶ್, ಕುಂ.ವೀರಭದ್ರಪ್ಪ, ಬಿ.ಟಿ.ಲಲಿತಾನಾಯಕ್, ವಸುಂಧರಾ ಭೂಪತಿ ಸೇರಿದಂತೆ 7 ಕ್ಕೂ ಹೆಚ್ಚು ಸಾಹಿತಿಗಳಿಗೆ ಪದೇಪದೇ ಜೀವಬೆದರಿಕೆಯ ಪತ್ರಗಳು ಬರುತ್ತಿದ್ದವು. ಈ ಬಗ್ಗೆ ಚಿತ್ರದುರ್ಗ, ಕೊಟ್ಟೂರು, ಸಂಜಯನಗರ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು, ಹಾರೋಹಳ್ಳಿ, ಬಸವೇಶ್ವರನಗರ ಪೊಲೀಸ್ ಠಾಣೆಗಳಲ್ಲಿ ತಲಾ ಎರಡು ಪ್ರಕರಣಗಳು ಸೇರಿ ಒಟ್ಟು 7 ಪ್ರಕರಗಣಗಳು ದಾಖಲಾಗಿದ್ದವು.
ಈ ಹಿಂದೆ ರಾಜ್ಯದಲ್ಲಿ ಸಾಹಿತಿ ಎಂ.ಎಂ.ಕಲಬುರ್ಗಿ, ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಹಿನ್ನೆಲೆಯಲ್ಲಿ ಸಾಹಿತಿಗಳಿಗೆ ಬರುತ್ತಿರುವ ಬೆದರಿಕೆ ಪತ್ರ ಆತಂಕ ಮೂಡಿಸಿತ್ತು. ಖುದ್ದು ಮುಖ್ಯಮಂತ್ರಿ, ಗೃಹಸಚಿವರುಗಳೇ ಸಾಹಿತಿಗಳೊಂದಿಗೆ ಸಭೆ ನಡೆಸಿ ಸಮಾಲೋಚಿಸಿದ್ದರು. ಪ್ರಕರಣವನ್ನು ಕಳೆದ ತಿಂಗಳು ಸಿಸಿಬಿ ತನಿಖೆಗೆ ವಹಿಸಲಾಗಿತ್ತು.
ಪತ್ರದ ಹಸ್ತಾಕ್ಷರ ಹಾಗೂ ಪೊಸ್ಟ್ ಮಾಡಲಾಗಿದ್ದ ಸ್ಥಳಗಳ ಜಾಡು ಹಿಡಿದ ಸಿಸಿಬಿ ಪೊಲೀಸರು ಸೆ.28 ರಂದು ಆರೋಪಿಯನ್ನು ದಾವಣಗೆರೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 7 ಪ್ರಕರಣಗಳಲ್ಲಷ್ಟೇ ಅಲ್ಲದೆ, ಆರೋಪಿ ವಿರುದ್ಧ ಈ ಮೊದಲು ಎರಡು ಪ್ರಕರಣಗಳು ದಾಖಲಾಗಿದ್ದ ಮಾಹಿತಿ ಇದೆ.
7 ಮಂದಿಯ ಜೊತೆಗೆ ಇನ್ನೂ ಹಲವು ಸಾಹಿತಿಗಳಿಗೆ ಆರೋಪಿ ಬೆದರಿಕೆ ಪತ್ರ ಬರೆದಿರುವ ಬಗ್ಗೆ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ. ಈತ ಹಿಂದೂ ಸಂಘಟನೆಯೊಂದರ ಕಾರ್ಯಕರ್ತ ಎಂದು ಹೇಳಲಾಗಿದೆ.
ಬೆದರಿಕೆ ಪತ್ರ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ-ಸಿಎಂ ಸಿದ್ದರಾಮಯ್ಯ
ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿ ಬಂಧಿಸಲಾಗಿದ್ದು, ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಫೇಸ್ಬುಕ್ ಪೋಸ್ಟ್ ಮಾಡಿದ್ದಾರೆ.
ನಾಡಿನ ಹಿರಿಯ ಸಾಹಿತಿಗಳು, ಬರಹಗಾರರು, ರಾಜಕೀಯ ನಾಯಕರು, ಧರ್ಮ ಗುರುಗಳಿಗೆ ಪತ್ರಗಳ ಮೂಲಕ ಜೀವ ಬೆದರಿಕೆ ಒಡ್ಡುತ್ತಿದ್ದ ದಾವಣಗೆರೆ ಮೂಲದ ಶಿವಾಜಿ ರಾವ್ ಜಾಧವ್ ಎಂಬ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ.
ಆರೋಪಿಯ ಜೊತೆ ಯಾವುದೇ ಸಂಘಟನೆ ಅಥವಾ ವ್ಯಕ್ತಿಗಳು ಶಾಮೀಲಾಗಿದ್ದರೂ ಅವರನ್ನು ಪತ್ತೆಹಚ್ಚಿ ಕಾನೂನಿನ ಕೈಗಳಿಗೆ ಒಪ್ಪಿಸುವ ಮೂಲಕ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದಿದ್ದಾರೆ.
ನಾಡಿನ ಪ್ರತಿ ವ್ಯಕ್ತಿಯ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿಹಿಡಿಯಲು ನಮ್ಮ ಸರ್ಕಾರ ಬದ್ಧವಿದೆ. ಸಮಾಜಮುಖಿ ಧ್ವನಿ ಅಡಗಿಸಲು ಯತ್ನಿಸುವ ದುಷ್ಟ ಶಕ್ತಿಗಳೆಡೆಗೆ ನಮ್ಮದು ‘ಜೀರೊ ಟಾಲರೆನ್ಸ್’ ಎಂದು ತಿಳಿಸಿದ್ದಾರೆ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…