ಬೆಂಗಳೂರು- ಮೀಸಲಾತಿ ವಿಚಾರದಲ್ಲಿ ದೀರ್ಘಕಾಲದ ಬೇಡಿಕೆ ಈಡೇರಿಸುವ ಹಾಗೂ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯವನ್ನು ಮತ್ತಷ್ಟು ಆಳಕ್ಕೆ ಒಯ್ಯುವ ಐತಿಹಾಸಿಕ ಪ್ರಯತ್ನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮಾಡಿದೆ ಎಂದು ಸಂಸದ ತೇಜಸ್ವಿಸೂರ್ಯ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ನಿರ್ಧಾರದಿಂದ ಇಲ್ಲಿನವರೆಗೆ ಯಾವ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಸಿಕ್ಕಿರಲಿಲ್ಲವೋ ಅವರಿಗೆ ನ್ಯಾಯ ಒದಗಿಸಲು ಸಾಧ್ಯವಾಗಿದೆ. ಒಳ ಮೀಸಲಾತಿ ಘೋಷಣೆ ವಿರೋಧಿಸುವ ಕಾಂಗ್ರೆಸ್ ಧೋರಣೆ ಎಲ್ಲರಲ್ಲಿ ಆಶ್ಚರ್ಯ ತಂದಿದೆ. ಅದು ಅಸಹ್ಯ ತರಿಸುವಂತಿದೆ ಎಂದು ಆಕ್ಷೇಪಿಸಿದರು.
ಅಲ್ಪಸಂಖ್ಯಾತರಿಗೆ ಇದ್ದ, ಮುಸ್ಲಿಂ ಸಮುದಾಯಕ್ಕೆ ಸಂವಿಧಾನಬಾಹಿರವಾಗಿ ಕೊಡುತ್ತಿದ್ದ ಶೇ.4 ಮೀಸಲಾತಿಯನ್ನು ರದ್ದುಪಡಿಸಿ ಲಿಂಗಾಯತ, ಒಕ್ಕಲಿಗರಿಗೆ ನೀಡಿದ್ದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದರು.
ಶೇ.13ರಷ್ಟು ಮುಸ್ಲಿಂ ಸಮುದಾಯ ರಾಜ್ಯದಲ್ಲಿದೆ. ಅದಕ್ಕೆ ಅನುಗುಣವಾಗಿ ಅವರಿಗೆ ಮೀಸಲಾತಿ ಕೊಡುವುದಾಗಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರು ಹೇಳುತ್ತಿದ್ದಾರೆ. ಇದು ರಾಜ್ಯದ ಹಿಂದುಳಿದ ಸಮುದಾಯಗಳಿಗೆ ಮಾಡುತ್ತಿರುವ ಅತ್ಯಂತ ಘೋರ ಅನ್ಯಾಯ ಎಂದರು.
ಕಾಂಗ್ರೆಸ್ ಪಾರ್ಟಿ 1954ರಿಂದ ಇತಿಹಾಸದುದ್ದಕ್ಕೂ ನಿರಂತರವಾಗಿ ಒಬಿಸಿ ಸಮುದಾಯಗಳ ವಿರುದ್ಧ ಪಿತೂರಿ ಮಾಡುತ್ತಲೇ ಬಂದಿದೆ. ಕಾಂಗ್ರೆಸ್ ಪಕ್ಷವು ಹಿಂದುಳಿದ ಸಮುದಾಯದ ಸಾಂವಿಧಾನಿಕ ಹಕ್ಕುಗಳ ನಿರಾಕರಣೆ ಮಾಡುತ್ತಿದೆ. ಅಲ್ಲದೆ ಈ ಸಮುದಾಯದ ಹಕ್ಕು, ಮೀಸಲಾತಿಯನ್ನು ಕಿತ್ತುಕೊಂಡು ಮುಸ್ಲಿಮರಿಗೆ ನೀಡಿ ತುಷ್ಟೀಕರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಂಧ್ರದಲ್ಲಿ 2005ರಲ್ಲಿ ಕಾಂಗ್ರೆಸ್ ಪಕ್ಷ ಅಕಾರದಲ್ಲಿದ್ದಾಗ ಕೇವಲ ಧರ್ಮದ ಆಧಾರದಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿಯನ್ನು ಒಬಿಸಿ ಸಮುದಾಯದ ಬಾಸ್ಕೆಟ್‍ನಿಂದ ಕಿತ್ತು ಕೊಟ್ಟಿದೆ. ಅವರ ಸಾಮಾಜಿಕ ಹಿಂದುಳಿದಿರುವಿಕೆ, ವಿದ್ಯೆಯಲ್ಲಿನ ಹಿಂದುಳಿದಿರುವಿಕೆ ಇದಕ್ಕೆ ಆಧಾರವಾಗಿರಲಿಲ್ಲ. ಅಲ್ಲಿನ ಹೈಕೋರ್ಟ್, ಸುಪ್ರೀಂ ಕೋರ್ಟ್ ಅದನ್ನು ರದ್ದು ಮಾಡಲು ಸೂಚಿಸಿತ್ತು. ಆದರೂ ಮತ್ತೆ 2010ರಲ್ಲಿ ಶೇ 4 ಮೀಸಲಾತಿಯನ್ನು ಕೊಡಲಾಗಿದೆ ಎಂದು ವಿವರಿಸಿದರು.
ಒಬಿಸಿ ಸಮುದಾಯ, ಹಿಂದೂಗಳ ವಿರುದ್ಧ ಕಾಂಗ್ರೆಸ್ ಪಕ್ಷಕ್ಕೆ ಕೋಪ, ಸಿಟ್ಟು ಯಾಕೆ? ಅವರ ಕಡೆಗಣನೆ ಏಕೆ? ಎಂದು ಜನತೆ ಪ್ರಶ್ನಿಸುತ್ತಿದ್ದಾರೆ ಎಂದು ತೇಜಸ್ವಿಸೂರ್ಯ ಕೇಳಿದರು.
ಮಂಡಲ್ ಕಮಿಷನ್ ವರದಿಯನ್ನೂ ಸಂಸತ್ತಿನಲ್ಲಿ ರಾಜೀವ್ ಗಾಂಧಿ ಅವರು ಅಕೃತವಾಗಿ ವಿರೋಸಿದ್ದರು. ಹಿಂದುಳಿದ ಸಮುದಾಯಗಳ ಮೇಲೆ ಯಾಕಿಷ್ಟು ದ್ವೇಷ ಎಂಬ ಪ್ರಶ್ನೆಗೆ ಇದು ಇನ್ನಷ್ಟು ಪುಷ್ಟಿ ಕೊಡುವಂತಿದೆ. ವಿಪಿ ಸಿಂಗ್ ಸರಕಾರವು ಮಂಡಲ್ ಆಯೋಗದ ಶೇ 27 ಮೀಸಲಾತಿ ಜಾರಿಗೆ ಮುಂದಾದಾಗ ಇದನ್ನು ಬಿಜೆಪಿ ಬಾಹ್ಯ ಬೆಂಬಲ ಕೊಟ್ಟಿತ್ತು. ಆ ಮೂಲಕ ಅದರ ಜನರಿಗೆ ಸಹಕರಿಸಿದೆ ಎಂದು ತಿಳಿಸಿದರು.
ವೈದ್ಯಕೀಯ ಪದವಿ, ಸ್ನಾತಕೋತ್ತರ ಪದವಿ ಶಿಕ್ಷಣದಲ್ಲಿ ಒಬಿಸಿ ಸಮುದಾಯಕ್ಕೆ ಶೇ 27 ರಷ್ಟು ಮೀಸಲಾತಿ ಬೇಡಿಕೆ ಇದ್ದರೂ ಅದನ್ನು ಮಾಡಿರಲಿಲ್ಲ. 2004ರಿಂದ 2014ರವರೆಗೆ ಯುಪಿಎ ಸರಕಾರ ಅಕಾರದಲ್ಲಿದ್ದಾಗ ಈ ಮನವಿಯನ್ನು ಯಾಕೆ ಪುರಸ್ಕಾರ ಮಾಡಿರಲಿಲ್ಲ ಎಂದು ಕೇಳಿದರು. ದಶಕಗಳ ಬೇಡಿಕೆಯಾದ ಇದನ್ನೂ ಕೂಡ ಮೋದಿಜಿ ಸರಕಾರ ಈಡೇರಿಸಿ ಹಿಂದುಳಿದ ಸಮಾಜಕ್ಕೆ ನ್ಯಾಯ ದೊರಕಿಸಿ ಕೊಟ್ಟಿದೆ ಎಂದು ವಿಶ್ಲೇಷಿಸಿದರು.
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…
ಬೆಂಗಳೂರು : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮಹಾಕುಸಿತ ಮುಂದುವರಿದಿದೆ. ಶುಕ್ರವಾರ ಗ್ರಾಮ್‌ಗೆ 800 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ…
ಬೆಂಗಳೂರು : ಖ್ಯಾತ ಉದ್ಯಮಿ ಮತ್ತು ಕಾನ್ಛಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ…
ಮೈಸೂರು : ನಗರದಲ್ಲಿ ಕೋಟ್ಯಾಂತರ ರೂ. ಮೊತ್ತದ ಡ್ರಗ್ಸ್ ತಯಾರಿಕೆ ನಡೆಯುತ್ತಿದ್ದರೂ ಪತ್ತೆ ಹಚ್ಚುವಲ್ಲಿ ನಗರದ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ…
ಮುಂಬೈ : ಮಹಾರಾಷ್ಟ್ರದ ರಾಜಕೀಯದಲ್ಲಿ ಒಂದು ಐತಿಹಾಸಿಕ ಕ್ಷಣ. ಎನ್‌ಸಿಪಿ ನಾಯಕಿ ದಿ.ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್…