ಮುಂಬಯಿ : ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರನ್ನು ಡ್ರಗ್ಸ್ ಆನ್ ಕ್ರೂಸ್ ಪ್ರಕರಣದಲ್ಲಿ ಸಿಲುಕಿಸದಿರಲು 25 ಕೋಟಿ ರೂ. ಲಂಚ ಕೇಳಿದ ಆರೋಪದ ಮೇಲೆ ಎನ್‌ಸಿಬಿ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ಮತ್ತು ಇತರ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಿದ ನಂತರ ಶುಕ್ರವಾರ ಅವರ ನಿವಾಸ, ಕಚೇರಿಗಳ ಆವರಣದಲ್ಲಿ ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮುಂಬೈ, ದೆಹಲಿ, ರಾಂಚಿ ಮತ್ತು ಕಾನ್ಪುರದ 29 ಸ್ಥಳಗಳಲ್ಲಿ ಶೋಧ ಕಾರ್ಯಗಳನ್ನು ನಡೆಸಲಾಗಿದೆ.
ಅಕ್ಟೋಬರ್ 2, 2021 ರಂದು ಕಾರ್ಡೆಲಿಯಾ ಕ್ರೂಸ್ ಹಡಗಿನಲ್ಲಿ ಡ್ರಗ್ ಬಸ್ಟ್ ಪ್ರಕರಣದಲ್ಲಿ ಆರ್ಯನ್ ಖಾನ್ ಅವರನ್ನು ಬಂಧಿಸಲಾಗಿತ್ತು. ಚಾರ್ಜ್ ಶೀಟ್ ಸಲ್ಲಿಸಿದ ಎನ್‌ಸಿಬಿ ಆರ್ಯನ್ ಖಾನ್‌ಗೆ ಕ್ಲೀನ್ ಚಿಟ್ ನೀಡಿತ್ತು, ಆದರೆ ಡ್ರಗ್ಸ್ ವಿರೋಧಿ ಏಜೆನ್ಸಿ ಸ್ಥಾಪಿಸಿದ ಎಸ್‌ಐಟಿ ಸಮೀರ್ ವಾಂಖೆಡೆ ನೇತೃತ್ವದ ತನಿಖೆಯಲ್ಲಿ ಲೋಪವಾಗಿದೆ ಎಂದು ಹೇಳಿದೆ.
ಐಆರ್‌ಎಸ್ ಅಧಿಕಾರಿ ವಾಂಖೆಡೆ ಮತ್ತು ಇತರರು ಮಾದಕ ದ್ರವ್ಯ ದಂಧೆಯಲ್ಲಿ ಆರ್ಯನ್ ಖಾನ್ ಅವರನ್ನು ಬಂಧಿಸದಿರಲು 25 ಕೋಟಿ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಅಧಿಕಾರಿ ಮತ್ತು ಆತನ ಸಹಚರರಿಂದ ಮುಂಗಡವಾಗಿ 50 ಲಕ್ಷ ರೂಪಾಯಿ ಸಂಗ್ರಹಿಸಲಾಗಿದೆ ಎಂದು ಸಿಬಿಐಗೆ ಮಾಹಿತಿ ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರ್ಯನ್ ಖಾನ್ ಬಂಧನದ ವೇಳೆ ಮುಂಬೈನ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮುಖ್ಯಸ್ಥರಾಗಿದ್ದ ವಾಂಖೆಡೆ ಅವರನ್ನು ಕಳೆದ ವರ್ಷ ಮೇ ತಿಂಗಳಲ್ಲಿ ಚೆನ್ನೈನಲ್ಲಿರುವ ತೆರಿಗೆದಾರರ ಸೇವೆಗಳ ಮಹಾನಿರ್ದೇಶನಾಲಯಕ್ಕೆ ವರ್ಗಾಯಿಸಲಾಗಿತ್ತು.
ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…
ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ಚಳಿ ತುಂಬಾ ಜಾಸ್ತಿಯಿದ್ದು, ಶೀತಗಾಳಿ ಹೆಚ್ಚಾಗಲು ಕರಾವಳಿ ತೀರ ಪ್ರದೇಶದಲ್ಲಾದ ವಾತಾವರಣ ಬದಲಾವಣೆ ಕಾರಣ ಎಂದು…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ ಮಾಡಿರುವ ವಿಚಾರ ಭಾರೀ ವಿವಾದಕ್ಕೆ…
ಕುವೈತ್/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಕುವೈತ್ ಪ್ರವಾಸದಲ್ಲಿದ್ದು, ಇಲ್ಲಿನ ರಾಜ ಶೇಕ್ ಮಿಶಾಲ್ ಅಲ್…
ಕಲಬುರ್ಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು, 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ…
ಬೆಂಗಳೂರು: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆ ಅಮಿತ್…