ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ 10 ಸಾವಿರ ರೂ ದಂಡ ವಿಧಿಸಿದೆ ಎಂದು ಹೈಕೋರ್ಟ್ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ.
2022ರ ಏಪ್ರಿಲ್ 14 ರಂದು ಗುತ್ತಿಗೆದಾರ ಸಂತೋಷ್ `ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಹಾಗೂ ಸಿದ್ದರಾಮಯ್ಯ ಸೇರಿದಂತೆ ರೇಸ್ ವ್ಯೂ ಹೋಟೆಲ್ ಬಳಿ ರೇಸ್ ಕೋರ್ಸ್ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದರು.
ಪ್ರತಿಭಟನೆ ವೇಳೆ ರಸ್ತೆ ಸಂಚಾರಕ್ಕೆ ಸಾರ್ವಜನಿಕರಿಗೆ ಅಡ್ಡಿಯಾವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ, ಸುರ್ಜೇವಾಲಾ ಸೇರಿದಂತ ಕಾಂಗ್ರೆಸ್‌ನ ಹಲವು ನಾಯಕರಿಗೆ ದಂಡ ವಿಧಿಸಿ, ಸಿಎಂ ಸಿದ್ದರಾಮಯ್ಯ ಮಾ.6ರಂದು ಕೋರ್ಟ್‌ಗೆ ಹಾಜರಾಗುವಂತೆ ಸೂಚನೆ ನೀಡಿದೆ.