ಬೆಂಗಳೂರು : ತಾಯಿಯನ್ನು ಕೊಂದು ಸೂಟ್‌ಕೇಸ್‌ನಲ್ಲಿ ಶವ ಹೊತ್ತುಕೊಂಡು ಮಗಳು ಪೊಲೀಸ್ ಠಾಣೆಗೆ ಬಂದು ಆತಂಕ ಸೃಷ್ಟಿಸಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ.
ಸೆನಾಲಿ ಸೇನ್ (39) ಹೆತ್ತ ತಾಯಿಯನ್ನು ಕೊಲೆ ಮಾಡಿದಾಕೆ. 70 ವರ್ಷದ ಬೀವಾ ಪಾಲ್ ಕೊಲೆಯಾದ ವೃದ್ಧೆ.
ಸೆನಾಲಿ ಸೇನ್ ಅಮ್ಮ ಮತ್ತು ಅತ್ತೆ ಒಂದೇ ಮನೆಯಲ್ಲಿದ್ದರು. ಇಬ್ಬರೂ ದಿನಾ ಗಲಾಟೆ ಮಾಡಿಕೊಳ್ಳುತ್ತಿದ್ದರು. ಬೀಗರ ಜಗಳಕ್ಕೆ ಬೇಸತ್ತಿದ್ದ ಬೀವಾ ಪಾಲ್ ನಿದ್ರೆ ಮಾತ್ರೆ ನುಂಗಿ ಸಾಯೋದಾಗಿ ಹೇಳಿದ್ದಾರೆ. ಬೆದರಿಕೆಯಂತೆಯೇ ಮುಂಜಾನೆ ಸೆನಾಲಿ ಸೇನ್ ತನ್ನ ತಾಯಿಗೆ 20 ನಿದ್ರೆ ಮಾತ್ರೆ ನುಂಗಿಸಿದ್ದಾಳೆ.
ತಾಯಿ ಹೊಟ್ಟೆ ನೋವು ಎಂದಾಗ ವೇಲ್‌ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾಳೆ. ಟ್ರ‍್ಯಾಲಿ ಸೂಟ್‌ಕೇಸ್‌ನಲ್ಲಿ ತಾಯಿ ಶವವಿಟ್ಟು, ತಂದೆಯ ಫೋಟೊ ಇಟ್ಟು ಮಗಳು ಸ್ಟೇಷನ್‌ಗೆ ಬಂದಿದ್ದಾಳೆ.
ಬಿಳೇಕಳ್ಳಿಯ ಎನ್‌ಎಸ್‌ಆರ್ ಗ್ರೀನ್ ಅಪಾರ್ಟ್ಮೆಂಟ್‌ನಿಂದ ತಾಯಿಯ ಮೃತದೇಹದೊಂದಿಗೆ ಮೈಕೊಲೇಔಟ್ ಪೊಲೀಸ್ ಠಾಣೆಗೆ ಸೆನಾಲಿ ಬೇನ್ ಬಂದಿದ್ದಾಳೆ. ಇದನ್ನು ಕಂಡು ಪೊಲೀಸರೇ ದಂಗಾಗಿದ್ದಾರೆ.
ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸೆನಾಲಿ ಸೇನ್‌ಳನ್ನು ಬಂಧಿಸಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…