ನವದೆಹಲಿ : ಇಸ್ರೇಲ್-ಹಮಾಸ್ ಯುದ್ಧದ ನಡುವೆ ಸಿಲುಕಿರುವ ಭಾರತೀಯರನ್ನು ಕರೆತರಲು ಆಪರೇಷನ್ ಅಜಯ್ ಅನ್ನು ಪ್ರಾರಂಭಿಸಲಾಗಿದೆ. ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಂದು ರಾತ್ರಿ ಟೆಲ್ ಅವಿವ್‌ನ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಲಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಟೆಲ್ ಅವಿವ್‌ನಿಂದ ದೆಹಲಿಗೆ ಚಾರ್ಟರ್ಡ್ ಫ್ಲೈಟ್ ಅನ್ನು ಕಳುಹಿಸಿರುವುದಾಗಿ ವಿದ್ಯಾರ್ಥಿಗಳಿಗೆ ಮೇಲ್ ಸಂದೇಶ ಕಳುಹಿಸಿದೆ. ಈ ವಿಮಾನ ಇಂದು ಇಸ್ರೇಲ್ ಕಾಲಮಾನ ರಾತ್ರಿ ಸುಮಾರು 9 ಗಂಟೆಗೆ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಲಿದೆ.
ಭಾರತೀಯ ವಿದ್ಯಾರ್ಥಿಗಳಿಗೆ ಮೇಲ್‌ನಲ್ಲಿ ಗೂಗಲ್ ಫಾರ್ಮ್ ಅನ್ನು ಭರ್ತಿ ಮಾಡಲು ಕೇಳಲಾಗಿದೆ. ನಂತರ ಅವರು ದೃಢೀಕರಣ ಸಂದೇಶವನ್ನು ಸ್ವೀಕರಿಸುತ್ತಾರೆ. ಒಂದು ಚೆಕ್ ಇನ್ ಲಗೇಜ್ 23 ಕೆ.ಜಿ ಗಿಂತ ಹೆಚ್ಚಿರಬಾರದು ಮತ್ತು ಒಂದು ಕ್ಯಾಬಿನ್ ಲಗೇಜ್ ಅನ್ನು ಅನುಮತಿಸಲಾಗುವುದು ಎಂದು ಮೇಲ್‌ನಲ್ಲಿ ತಿಳಿಸಲಾಗಿದೆ.
ಇಸ್ರೇಲ್ ಮೇಲೆ ಹಮಾಸ್ ಉಗ್ರರು ದಾಳಿ ನಡೆಸಿದ ಬಳಿಕ ಎರಡೂ ಪ್ರದೇಶಗಳಲ್ಲಿ ಯುದ್ಧದ ಸ್ಥಿತಿ ತೀವ್ರಗೊಂಡಿದೆ. ಸಾವಿನ ಸಂಖ್ಯೆ 4,000ಕ್ಕೆ ಹತ್ತಿರವಾಗುತ್ತಿದ್ದಂತೆ ಭಾರತೀಯ ನಾಗರಿಕರನ್ನು ಇಸ್ರೇಲ್‌ನಿಂದ ಏರ್‌ಲಿಫ್ಟ್ ಮಾಡಲು ಭಾರತ ಆಪರೇಷನ್ ಅಜಯ್ ಅನ್ನು ಪ್ರಾರಂಭಿಸಿದೆ.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…