ನಿನ್ನೆ ( ಜನವರಿ 19 ) ಅಯೋಧ್ಯೆಯ ರಾಮಮಂದಿರದ ಗರ್ಭಗುಡಿ ತಲುಪಿರುವ ಬಾಲರಾಮನ ಫೋಟೊ ಲೀಕ್ ಆಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಮೊದಲಿಗೆ ಬಟ್ಟೆ ಇಂದ ಸುತ್ತಲ್ಪಟ್ಟ ವಿಗ್ರಹ, ಬಳಿಕ ಕಣ್ಣಿಗೆ ಮಾತ್ರ ಬಟ್ಟೆ ಕಟ್ಟಿದ ಬಾಲರಾಮನ ವಿಗ್ರಹದ ಫೋಟೊ ವೈರಲ್ ಆಗಿತ್ತು. ನಂತರ ಸಂಪೂರ್ಣ ಬಾಲರಾಮನ ಫೋಟೊ ಹರಿದಾಡಿತ್ತು.
ಈ ಫೋಟೊ ಕುರಿತು ಇದೀಗ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ ಮಾತನಾಡಿದ್ದು ಆಕ್ರೋಶ ಹೊರಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಫೋಟೊ ನಿಜವಾದುದ್ದಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಎಎನ್‌ಐ ಜತೆ ಮಾತನಾಡಿದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ “ಪ್ರಾಣ ಪ್ರತಿಷ್ಠೆ ಮುಗಿಯುವ ಮುನ್ನ ಬಾಲರಾಮ ಮೂರ್ತಿಯ ಕಣ್ಣುಗಳಿಗೆ ಕಟ್ಟಿರುವ ಬಟ್ಟೆಯನ್ನು ತೆಗೆಯುವ ಹಾಗಿಲ್ಲ. ಕಣ್ಣಿಗೆ ಬಟ್ಟೆ ಕಟ್ಟದೇ ಇರುವ ವಿಗ್ರಹ ನಿಜವಾದುದ್ದಲ್ಲ. ಹಾಗೇನಾದರೂ ಕಣ್ಣುಗಳು ಕಂಡಿದ್ದರೆ, ಈ ಫೋಟೊವನ್ನು ಹರಿಬಿಟ್ಟಿದ್ದು ಯಾರು, ವೈರಲ್ ಮಾಡಿದ್ದು ಯಾರು ಎಂಬುದರ ಕುರಿತು ತನಿಖೆ ಆಗಬೇಕು” ಎಂದು ಹೇಳಿಕೆ ನೀಡಿದ್ದಾರೆ.
ಇನ್ನು ಈ ಫೋಟೊವನ್ನು ವಿವಿಧ ಕ್ಷೇತ್ರಗಳ ಪ್ರಮುಖರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಎಲ್ಲೆಡೆ ವೈರಲ್ ಆಗಿದೆ. ಕಣ್ಣಿಗೆ ಬಟ್ಟೆ ಇಲ್ಲದೇ ಇರುವ ವಿಗ್ರಹದ ಫೋಟೊವನ್ನು ಮಂದಿರಕ್ಕೆ ಸ್ಥಳಾಂತರಿಸುವ ಮುನ್ನವೇ ಕ್ಲಿಕ್ಕಿಸಿರಬಹುದು ಎಂಬ ಸಂದೇಹವೂ ಸಹ ಇದೆ.
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…
ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…