ಹೊಸದಿಲ್ಲಿ : ಬುಡಕಟ್ಟು ಸಮುದಾಯದ ನಾಯಕ ವಿಷ್ಣು ದಿಯೋ ಸಾಯಿ ಅವರನ್ನು ಬಿಜೆಪಿ ಛತ್ತೀಸ್‌ಗಡದ ನೂತನ ಸಿಎಂ ಆಗಿ ಆಯ್ಕೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ರಾಯ್‌ಪುರದಲ್ಲಿ ರವಿವಾರ ನಡೆದ ಬಿಜೆಪಿ ಪಕ್ಷದ ಶಾಸಕಾಂಗ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.
ಬಿಜೆಪಿ ನೇಮಿಸಿದ್ದ ವೀಕ್ಷಕರ ಅಭಿಪ್ರಾಯದ ಮೇರೆಗೆ ವಿಷ್ಣು ದಿಯೋ ಸಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ರಾಯ್‌ಪುರದಲ್ಲಿ ಬಿಜೆಪಿಯಿಂದ ಹೊಸದಾಗಿ ಚುನಾಯಿತರಾದ 54 ಶಾಸಕರ ಪ್ರಮುಖ ಸಭೆಯ ನಂತರ ಛತ್ತೀಸ್‌ಗಡ ಮುಖ್ಯಮಂತ್ರಿಯಾಗಿ ವಿಷ್ಣು ದಿಯೋ ಸಾಯಿ ಅವರನ್ನು ಘೋಷಿಸಲಾಯಿತು.
2020 ರಿಂದ 2022ರವರೆಗೆ ಛತ್ತೀಸ್‌ಗಡದ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ವಿಷ್ಣು ದಿಯೋ ಸಾಯಿ, ನರೇಂದ್ರ ಮೋದಿಯವರ ಮೊದಲ ಅಧಿಕಾರಾವಧಿಯಲ್ಲಿ ಉಕ್ಕಿನ ಖಾತೆಯ ರಾಜ್ಯ ಸಚಿವರಾಗಿದ್ದರು.




