BREAKING NEWS

ಬುಡಕಟ್ಟು ಸಮುದಾಯದ ನಾಯಕ ಛತ್ತೀಸ್‌ಗಡದ ನೂತನ ಸಿಎಂ!

ಹೊಸದಿಲ್ಲಿ : ಬುಡಕಟ್ಟು ಸಮುದಾಯದ ನಾಯಕ ವಿಷ್ಣು ದಿಯೋ ಸಾಯಿ ಅವರನ್ನು ಬಿಜೆಪಿ ಛತ್ತೀಸ್‌ಗಡದ ನೂತನ ಸಿಎಂ ಆಗಿ ಆಯ್ಕೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ರಾಯ್‌ಪುರದಲ್ಲಿ ರವಿವಾರ ನಡೆದ ಬಿಜೆಪಿ ಪಕ್ಷದ ಶಾಸಕಾಂಗ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.

ಬಿಜೆಪಿ ನೇಮಿಸಿದ್ದ ವೀಕ್ಷಕರ ಅಭಿಪ್ರಾಯದ ಮೇರೆಗೆ ವಿಷ್ಣು ದಿಯೋ ಸಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ರಾಯ್‌ಪುರದಲ್ಲಿ ಬಿಜೆಪಿಯಿಂದ ಹೊಸದಾಗಿ ಚುನಾಯಿತರಾದ 54 ಶಾಸಕರ ಪ್ರಮುಖ ಸಭೆಯ ನಂತರ ಛತ್ತೀಸ್‌ಗಡ ಮುಖ್ಯಮಂತ್ರಿಯಾಗಿ ವಿಷ್ಣು ದಿಯೋ ಸಾಯಿ ಅವರನ್ನು ಘೋಷಿಸಲಾಯಿತು.

2020 ರಿಂದ 2022ರವರೆಗೆ ಛತ್ತೀಸ್‌ಗಡದ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ವಿಷ್ಣು ದಿಯೋ ಸಾಯಿ, ನರೇಂದ್ರ ಮೋದಿಯವರ ಮೊದಲ ಅಧಿಕಾರಾವಧಿಯಲ್ಲಿ ಉಕ್ಕಿನ ಖಾತೆಯ ರಾಜ್ಯ ಸಚಿವರಾಗಿದ್ದರು.

andolanait

Recent Posts

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

3 mins ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

6 mins ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

10 mins ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

19 mins ago

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago