ಕಮಲಕ್ಕೆ ಐತಿಹಾಸಿಕ ಗೆಲುವು; 33 ವರ್ಷಗಳ ನಂತರ ಬಿಜೆಪಿ ಅಭ್ಯರ್ಥಿಗೆ ಒಲಿದ ಮೇಯರ್‌ಪಟ್ಟ!

ಮೈಸೂರು: ಕಳೆದ 33 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿಗೆ ನಗರಪಾಲಿಕೆಯ ಮೇಯರ್‌ ಪಟ್ಟ ಒಲಿದಿದೆ.

ಬಿಜೆಪಿ ಅಭ್ಯರ್ಥಿ ಸುನಂದ ಪಾಲನೇತ್ರಾ ಅವರು ನೂತನ ಮೇಯರ್‌ ಆಗಿ ಆಯ್ಕೆಯಾದರು. ಪ್ರಭಾರಿ ಮೇಯರ್‌ ಆಗಿದ್ದ ಆನ್ವರ್‌ಬ್ಹೇಗ್‌ ಉಪಮೇಯರ್‌ ಆಗಿ ಮುಂದುವರಿಯಲಿದ್ದಾರೆ.

ಇದಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸವಿವ ಎಸ್‌.ಟಿ.ಸೋಮಶೇಖರ್‌ ಅವರು, ಮೈಸೂರಿನ ಮೇಯರ್ ಆಗಿ ಆಯ್ಕೆಗೊಂಡ ಸುನಂದಾ ಪಾಲನೇತ್ರರವರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾಗಿ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಲು ಬಯಸುತ್ತೇನೆ. ಈ ಗೆಲುವಿಗೆ ಕಾರಣರಾದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಲು ಬಯಸುತ್ತೇವೆ ಎಂದು ಪ್ರಸಂಶೆ ವ್ಯಕ್ತಪಡಿಸಿದ್ದಾರೆ.

× Chat with us