ಬೆಂಗಳೂರು : ಪ್ರಿಯತಮನೊಬ್ಬ ತನ್ನ ಪ್ರಿಯತಮೆಯನ್ನು ಕುಕ್ಕರ್ ನಿಂದ ಹೊಡೆದು ಕೊಲೆ ಮಾಡಿದ ಘಟನೆ ಸಿಲಿಕಾನ್ ಸಿಟಿಯ ಬೇಗೂರಿನಲ್ಲಿ ನಡೆದಿದೆ.
ಬೇಗೂರಿನ ನ್ಯೂ ಮೈಕೋ ಲೇಔಟ್ ನಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ದೇವಾ (24) ಹತ್ಯೆಯಾದ ಯುವತಿಯಾಗಿದ್ದು, ವೈಷ್ಣವ್ (24) ಹತ್ಯೆ ಮಾಡಿದ ಆರೋಪಿ.
ಕೇರಳ ಮೂಲದವರಾಗಿರುವ ಈ ಜೋಡಿ ಕಳೆದ ಎರಡು ವರ್ಷಗಳಿಂದ ಲಿವಿಂಗ್ ಟುಗೇದರ್ ನಲ್ಲಿತ್ತು. ಇತ್ತೀಚೆಗೆ ಪ್ರಿಯತಮೆ ದೇವಾ ಬೇರೊಬ್ಬ ಯುವಕನ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ಆರೋಪ ಮಾಡಲಾಗಿತ್ತು. ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಆಗಾಗ ಜಗಳಗಳು ನಡೆಯುತ್ತಿತ್ತು. ಶನಿವಾರ ರಾತ್ರಿ ಕೂಡ ಇದೇ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ ವೈಷ್ಣವ್ ಅಲ್ಲೇ ಇದ್ದ ಕುಕ್ಕರ್ ನಿಂದ ಯುವತಿಯ ತಲೆಗೆ ಹೊಡೆದಿದ್ದಾನೆ.
ಹಲ್ಲೆಯಿಂದಾಗಿ ತೀವ್ರ ರಕ್ತಸ್ರಾವವಾಗಿ ಯುವತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಸದ್ಯ ಮೈಕೋ ಲೇಔಟ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ…
ಲಕ್ಷ್ಮಿಕಾಂತ್ ಕೊಮಾರಪ್ಪ ೨೦೨೩ರ ಡಿ.೪ರಂದು ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದ ಅರ್ಜುನ; ೨ ವರ್ಷ ಕಳೆದರೂ ಅರ್ಜುನನ ಸ್ಮಾರಕ, ಪ್ರತಿಮೆಗಿಲ್ಲ…
ಮೈಸೂರು: ಸಂಭ್ರಮ, ಸಡಗರ, ವಿಶೇಷ ಪ್ರಾರ್ಥನೆಯೊಂದಿಗೆ ಕ್ರೈಸ್ತ ಧರ್ಮದ ದೈವ ಬಾಲಏಸುವಿನ ಜಯಂತಿಯ ಸ್ಮರಣೆಯು ಅದ್ಧೂರಿಯಾಗಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ…
ಪ್ರಶಾಂತ್ ಎಸ್. ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸಮಸ್ಯೆ ಕಣ್ಣಿಗೆ ದೂಳು ಬಿದ್ದರೆ ಅನಾಹುತ ಸಾಧ್ಯತೆ ವಾಹನ ಸವಾರರಿಗೆ ಸವಾಲು; ಎಚ್ಚರ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…