BREAKING NEWS

ರೈಲಿನಲ್ಲಿ ಶೂಟೌಟ್ ಮಾಡಿದ್ದ ಅಧಿಕಾರಿ ಸೇವೆಯಿಂದ ವಜಾ

ಮುಂಬೈ : ಚಲಿಸುತ್ತಿದ್ದ ರೈಲಿನಲ್ಲಿ ನಾಲ್ವರಿಗೆ ಗುಂಡಿಕ್ಕಿದ್ದ ರೈಲ್ವೆ ಪೊಲಿಸ್ ಪಡೆ ಕಾನ್ಸ್ ಟೆಬಲ್ ಚೇತನ್ ಸಿಂಗ್ ಚೌಧರಿಯನ್ನು ಸೇವೆಯಿಂದ ವಜಾ ಮಾಡಲಾಗಿದೆ.

ಜೈಪುರ-ಮುಂಬೈ ಸೆಂಟ್ರಲ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಜುಲೈ 31ರಂದು ಈ ಘಟನೆ ನಡೆದಿತ್ತು. ಇದೀಗ ಮುಂಬೈ ಕೇಂದ್ರದ ಆರ್ ಪಿಎಫ್ ಹಿರಿಯ ವಿಭಾಗೀಯ ಭದ್ರತಾ ಆಯುಕ್ತರು ಆಗಸ್ಟ್ 14ರಂದು ಚೌಧರಿಯನ್ನು ಸೇವೆಯಿಂದ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

ಜುಲೈ 31ರಂದು ಮೂವರು ಪ್ರಯಾಣಿಕರಾದ ಅಬ್ದುಲ್ ಖಾದರ್, ಮುಹಮ್ಮದ್ ಹುಸೇನ್ ಭನ್ಪುರವಾಲ, ಸಯ್ಯದ್ ಸೈಫುದ್ದೀನ್ ಹಾಗೂ ಅಸ್ಗರ್ ಅಬ್ಬಾಸ್ ಶೇಖ್ ಅವರು ರೈಲಿನ ವಿವಿಧ ಬೋಗಿಗಳಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಆರೋಪಿ ಚೌಧರಿ ರೈಲಿನಲ್ಲಿ ಫೈರಿಂಗ್ ಮಾಡಿದ್ದನು. ಅಲ್ಲದೆ ರೈಲಿನ ಪ್ಯಾಂಟ್ರಿ ಕಾರ್ ಬಳಿ ತೆರಳಿ ಮತ್ತೊಬ್ಬ ಪ್ರಯಾಣಿಕರ ಮೇಲೆ ಗುಂಡು ಹಾರಿಸಿದ್ದಾನೆ. ನಂತರ ಎಸ್ 6 ಕೋಚ್‍ಗೆ ತೆರಳಿ ಮತ್ತೊಬ್ಬ ಪ್ರಯಾಣಿಕನ ಮೇಲೆ ಗುಂಡು ಹಾರಿಸಿದ್ದನು.

lokesh

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

10 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

10 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

11 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

11 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

11 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

11 hours ago