BREAKING NEWS

ಸಾರಿಗೆ ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟ ಪ್ರಯಾಣಿಕ

ಪಾಂಡವಪುರ : ಸಾರಿಗೆ ಬಸ್‌ನಿಂದ ಕೆಳಗೆ ಬಿದ್ದು ಪ್ರಯಾಣಿಕರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಜಕ್ಕನಹಳ್ಳಿ ಬಳಿಯ ಹೇಮಾವತಿ ನಾಲೆಯ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ತಾಲ್ಲೂಕಿನ ಅರಕನಕೆರೆ ಗ್ರಾಮದ ನಿವಾಸಿ ಚಲುವೇಗೌಡ(65) ಮೃತ ವ್ಯಕ್ತಿ.

ಜಕ್ಕನಹಳ್ಳಿ ಸರ್ಕಲ್‌ನಲ್ಲಿ ನಡೆಯುತ್ತಿದ್ದ ಸೋಮವಾರದ ಸಂತೆಗೆ ಬಂದಿದ್ದ ಮೃತ ಚಲುವೇಗೌಡರು, ಸಂತೆ ಮುಗಿಸಿ ವಾಪಸ್ಸು ಸಾರಿಗೆ ಬಸ್‌ನಲ್ಲಿ ಅರಕನಕೆರೆ ಗ್ರಾಮಕ್ಕೆ ತೆರಳುತ್ತಿದ್ದರು. ಸಾರಿಗೆ ಬಸ್ ತುಂಬಾ ರಶ್ ಇದ್ದ ಕಾರಣ ಚಲುವೇಗೌಡ ಡೋರ್ ಬಳಿಯೇ ನಿಂತಿದ್ದರು ಎನ್ನಲಾಗಿದೆ. ಸಾರಿಗೆ ಬಸ್‌ಗೆ ಡೋರ್ ಇಲ್ಲದ ಕಾರಣ ಬಸ್ ಚಲಿಸುವ ಸಂದರ್ಭದಲ್ಲಿ ರಸ್ತೆಯಲ್ಲಿದ್ದ ಗುಂಡಿಗೆ ಬಸ್‌ನ ಚಕ್ರ ಇಳಿದ ತಕ್ಷಣ ಆಯತಪ್ಪಿ ಚಲುವೇಗೌಡ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಸ್ಥಳೀಯರಿಂದ ಪ್ರತಿಭಟನೆ : ಘಟನೆಗೆ ಸಾರಿಗೆ ಬಸ್ ಚಾಲಕ ಹಾಗೂ ನಿರ್ವಾಹಕರ ಬೇಜವಬ್ದಾರಿಯೇ ಕಾರಣ ಎಂದು ಆರೋಪಿಸಿ ಸ್ಥಳೀಯರು, ಗ್ರಾಮಸ್ಥರು ಹಾಗೂ ಸಂಬಂಧಿಕರು ಮಂಡ್ಯ-ಜಕ್ಕನಹಳ್ಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಸಾರಿಗೆ ಬಸ್‌ಗೆ ಡೋರ್ ಇಲ್ಲದೆ ಇರುವುದೇ ಘಟನೆಗೆ ಕಾರಣವಾಗಿದೆ. ಬಸ್‌ಗೆ ಡೋರ್ ಇದಿದ್ದರೆ ಇಂತಹ ಘಟನೆಗಳು ಸಂಭವಿಸುತ್ತಿರಲಿಲ್ಲ ಎಂದು ಸಾರಿಗೆ ಅಧಿಕಾರಿಗಳ ವಿರುದ್ದ ಘೋಷಣೆಕೂಗಿ ಆಕ್ರೋಶ ಹೊರಹಾಕಿದರು.

ಸಾರಿಗೆ ಅಧಿಕಾರಿಗಳು ಸ್ಥಳಕ್ಕೆ ಬಂದು ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ದೊರಕಿಸಿಕೊಡಬೇಕು ಎಂದು ಪಟ್ಟುಹಿಡಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಸಾರಿಗೆ ವ್ಯವಸ್ಥಾಪಕ ನಾಗರಾಜು, ಅಧಿಕಾರಿಗಳಾದ ದಿನೇಶ್, ಚುಂಚಯ್ಯ ಅವರನ್ನು ಪ್ರತಿಭಟನಕಾರರು ತರಾಟೆಗೆ ತೆಗೆದುಕೊಂಡು, ಡೋರ್ ಇಲ್ಲದ ಬಸ್‌ಗಳನ್ನು ರಸ್ತೆಗೆ ಏಕೆ ಇಳಿಸಿದ್ದೀರಿ? ಡೋರ್ ಇಲ್ಲದ ಬಸ್‌ಗಳನ್ನು ಸಂಚರಿಸಲು ನೀವು ಆರ್‌ಟಿಒ ಅಧಿಕಾರಿಗಳಿಂದ ಅನುಮತಿ ಪಡೆದುಕೊಂಡಿದ್ದೀರಾ? ಈ ಘಟನೆಗೆ ಯಾರು ಹೊಣೆ? ಎಂದು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡರು.

ಬಳಿಕ ಸಾರಿಗೆ ಅಧಿಕಾರಿ ಮಾತನಾಡಿ, ಘಟನೆಗೆ ಸಾರಿಗೆ ನಿಗಮವೇ ಹೊಣೆ ಎಂದು ತಪ್ಪು ಒಪ್ಪಿಕೊಂಡು ಪರಿಹಾರ ನೀಡುವ ಭರವಸೆ ನೀಡಿದ ಹಿನ್ನೆಯಲ್ಲಿ ಸ್ಥಳೀಯರ ಪ್ರತಿಭಟನೆ ವಾಪಸ್ ಪಡೆದರು. ಬಳಿಕ ಸಾರಿಗೆ ಅಧಿಕಾರಿಗಳು ಶವಸಂಸ್ಕಾರಕ್ಕಾಗಿ ಸ್ಥಳದಲ್ಲಿಯೇ 25 ಸಾವಿರ ಹಣ ನೀಡಿ, 2.50 ಲಕ್ಷ ಪರಿಹಾರವನ್ನು ನೀಡುವುದಾಗಿ ಭರವಸೆ ನೀಡಿದರು.
ಬಳಿಕ ಮೃತದೇಹವನ್ನು ಪಾಂಡವಪುರ ಪಟ್ಟಣದ ಸಾರ್ವಜನಿಕ ಶವಾಗಾರದಲ್ಲಿ ಶವ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಯಿತು. ಘಟನೆ ಸಂಬಂಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

lokesh

Recent Posts

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

5 mins ago

ಬೆಳಗಾವಿ-ಮುಂಬೈ ಇಂಡಿಗೋ ವಿಮಾನ ಸೇವೆ: ದಿನಾಂಕ ಫಿಕ್ಸ್‌

ಬೆಳಗಾವಿ: ಗಡಿನಾಡು ಬೆಳಗಾವಿ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರಿದೆ. ಬೆಳಗಾವಿ ಮತ್ತು ನವಿ ಮುಂಬೈ ನಡುವೆ ನೇರ ವಿಮಾನ…

38 mins ago

ಬಾಲ್ಯವಿವಾಹ, ವರದಕ್ಷಿಣೆ ಕಾಯ್ದೆ ಕುರಿತು ಅರಿವು ಮೂಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ಬಾಲ್ಯವಿವಾಹ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವತಿಯಿಂದ ಗ್ರಾಮಗಳಲ್ಲಿ ಬೀದಿ…

51 mins ago

ಮೊದಲ ಬಾರಿ ಗೆದ್ದ 5 ಶಾಸಕರಿಗೆ ಮಂತ್ರಿ ಸ್ಥಾನ ಕೊಡಬೇಕು: ಪ್ರದೀಪ್‌ ಈಶ್ವರ್‌

ಬೆಂಗಳೂರು: ಮೊದಲ ಬಾರಿ ಗೆದ್ದ 31 ಶಾಸಕರ ಪೈಕಿ ಜನರಿಗಾದರೂ ಸಚಿವ ಸ್ಥಾನ ಕೊಡಬೇಕು. ಹೀಗಾಗಿ ನಾವೆಲ್ಲರೂ ಸೇರಿ ಹೈಕಮಾಂಡ್‌ಗೆ…

1 hour ago

ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆ ಆಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂದು ಖುದ್ದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, 200…

1 hour ago

ನಮಗೂ ಸಚಿವ ಸ್ಥಾನ ಕೊಡಿ: ಸಂಪುಟ ಪುನಾರಚನೆಗೆ 24 ಎಂಎಲ್‌ಸಿಗಳಿಂದ ಪತ್ರ

ಬೆಂಗಳೂರು: ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಒತ್ತಾಯ ಮಾಡಿ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದ ಬೆನ್ನಲ್ಲೇ, ಇದೀಗ 24…

1 hour ago