BREAKING NEWS

ಹೊಸಾ ಮಾದರಿಯಲ್ಲಿ ಬರುತ್ತಿದ್ದಾಳೆ ರಾಜ್ಯದ ಕೆಂಪು ಸುಂದರಿ !

ಬೆಂಗಳೂರು : ಕೆಎಸ್​ಆರ್​ಟಿಸಿ ಸಂಸ್ಥೆಯಿಂದ ಹೊಸ ಅಶ್ವಮೇಧ ಕ್ಲಾಸಿಕ್​ ಬಸ್​​​ಗಳನ್ನು ಕಾರ್ಯಾಚರಣೆಗೆ ಇಳಿಸುತ್ತಿದೆ. ಮಹಿಳಾ ಸುರಕ್ಷತೆ ದೃಷ್ಟಿಯಿಂದ ಹಲವು ಹೊಸ ಫೀಚರ್​ಗಳನ್ನು ಒಳಗೊಂಡಿರುವ ಈ ನಾನ್ ಎಸಿ ಬಸ್​​ಗಳಲ್ಲಿ ಕೂಡ ಮಹಿಳೆಯರಿಗೆ ಉಚಿತ ಪ್ರಯಾಣ ಇರಲಿದೆ.ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ನೂತನ ಬಸ್‌ಗಳಿಗೆ ಹಸಿರು ನಿಶಾನೆ ತೋರಿದರು.
ಏಪ್ರಿಲ್ ವೇಳೆಗೆ 800 ಅಶ್ವಮೇಧ ಕ್ಲಾಸಿಕ್ ಬಸ್‌ಗಳು ರಸ್ತೆಗೆ ಇಳಿಯಲಿದ್ದು, ಸೋಮವಾರ ಮೊದಲ ಹಂತದಲ್ಲಿ 100 ಬಸ್‌ಗಳಿಗೆ ಚಾಲನೆ ನೀಡಿದ್ದಾರೆ.

ವಿಶೇಷತೆಗಳು :  ಸದ್ಯ ಕಾರ್ಯಾರಂಭ ಮಾಡುತ್ತಿರುವ ನೂರು ಅಶ್ವಮೇಧ ಕ್ಲಾಸಿಕ್​ ಬಸ್​​​ಗಳಲ್ಲಿ ಮಹಿಳೆಯರ ಸುರಕ್ಷತೆಗಾಗಿ 12 ಪ್ಯಾನಿಕ್ ಬಟನ್, ಜಿಪಿಎಸ್, ಎರಡು ರೇರ್ ಕ್ಯಾಮರಾ, ಮೊಬೈಲ್ ಫೋನ್ ಚಾರ್ಜ್ ಹಾಕಿಕೊಳ್ಳಲು ಆರು ಚಾರ್ಜಿಂಗ್ ಪಾಯಿಂಟ್ ವ್ಯವಸ್ಥೆ ಮಾಡಲಾಗಿದೆ.

* 52 ಸೀಟು, ಬಸ್ಸಿನ ಒಳಗೆ ಮತ್ತು ಹೊರ ಭಾಗದಲ್ಲಿ ಎಲ್‌ಇಡಿ ಮಾರ್ಗಫಲಕ, ಪ್ರಯಾಣಿಕರು ಲಗೆಜ್ ಇಡಲು ದೊಡ್ಡದಾದ ಸ್ಥಳದ ವ್ಯವಸ್ಥೆ ಮಾಡಲಾಗಿದೆ.

  • ಅಶ್ವಮೇಧ ಕ್ಲಾಸಿಕ್​ ಬಸ್​​​ಗಳು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರದಿಂದ ರಾಜಧಾನಿಗೆ ಸಂಪರ್ಕ ಕಲ್ಪಿಸುವ ಪಾಯಿಂಟ್ ಟೂ ಪಾಯಿಂಟ್ ಎಕ್ಸ್‌ಪ್ರೆಸ್ ಬಸ್ಸುಗಳಾಗಿವೆ.
  • ಮಹಿಳೆಯರು ಈ ಬಸ್ಸುಗಳಲ್ಲೂ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಚುನಾವಣಾ ಪೂರ್ವ ನೀಡಿದ್ದ ಭರವಸೆಯಂತೆ ಮಹಿಳೆಯರಿಗೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆ ಜಾರಿಗೊಳಿಸಿತ್ತು.
  • ಸ್ಲೀಪರ್, ಐರಾವತ ಕ್ಲಬ್​ ಕ್ಲಾಸ್​, ಅಂಬಾರಿಯಂಥ ವಿಶೇಷ ಬಸ್​​ಗಳನ್ನು ಹೊರತುಪಡಿಸಿ ಇತರ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಲಾಗಿದೆ. ಅದರಂತೆ, ಇದೀಗ ಅಶ್ವಮೇಧ ಬಸ್​ಗಳಲ್ಲೂ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ ಘೋಷಣೆ ಮಾಡಲಾಗಿದೆ.
andolanait

Recent Posts

ಕೊಡಗು ಜಿಲ್ಲೆಯಲ್ಲಿ ಮನೆ ಗಣತಿ ಕಾರ್ಯ ಚುರುಕು

ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…

3 hours ago

ಏರುತ್ತಿರುವ ತಾಪಮಾನ; ತಂಪು ಪಾನೀಯಗಳಿಗೆ ಮೊರೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…

3 hours ago

ಆಗ ಟೈಲರ್ ಕಾಲ, ಈಗ ಆನ್ ಲೈನ್ ಕಾಲ…

ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…

3 hours ago

ಸೈಕಲ್ಲು, ಸಿರೀಂದ್ರ ಮತ್ತು ನನ್ನ ನಟರಾಜ ಸರ್ವೀಸು

ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…

3 hours ago

ತರುಣ ತಲೆಮಾರಿನ ಕೈಯಲ್ಲಿ ನೆರೆಯ ನೇಪಾಳದ ಚುಕ್ಕಾಣಿ…

ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…

3 hours ago

ದೇವನೂರಿಗೆ ಆಗಮಿಸಿದ ಪಂಪ

ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…

3 hours ago