BREAKING NEWS

ರೈಲು ಅಪಘಾತಕ್ಕೆ ಮೂಲ ಕಾರಣ ಹಾಗೂ ಕಾರಣಕರ್ತರನ್ನು ಪತ್ತೆಹಚ್ಚಲಾಗಿದೆ : ಅಶ್ವಿನಿ ವೈಷ್ಣವ್

ನವದೆಹಲಿ : ಒಡಿಶಾದ ಬಾಲಸೋರ್​ನಲ್ಲಿ ಸಂಭವಿಸಿದ ಮೂರು ರೈಲುಗಳ ನಡುವಿನ ಅಪಘಾತಕ್ಕೆ ಏನು ಕಾರಣ ಹಾಗೂ ಕಾರಣಕರ್ತರು ಯಾರೆಂಬುದನ್ನು ಪತ್ತೆಹಚ್ಚಲಾಗಿದ್ದು, ಶೀಘ್ರವೇ ಮಾಹಿತಿ ನೀಡಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಎರಡು ಪ್ಯಾಸೆಂಜರ್ ರೈಲು ಹಾಗೂ ಗೂಡ್ಸ್​ ರೈಲು ನಡುವೆ ಸಂಭವಿಸಿದ ಅಪಘಾತದಲ್ಲಿ 288 ಮಂದಿ ಮೃತಪಟ್ಟಿದ್ದು, 1,100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ರೈಲ್ವೆ ಸುರಕ್ಷತಾ ಆಯುಕ್ತರು ತನಿಖೆ ನಡೆಸಿದ್ದು, ಘಟನೆಗೆ ಕಾರಣ ಹಾಗೂ ಈ ಅವಘಡಕ್ಕೆ ಕಾರಣರಾದವರನ್ನು ಗುರುತಿಸಿದ್ದಾರೆ. ಎಲೆಕ್ಟ್ರಾನಿಕ್​ ಇಂಟರ್​ಲಾಕಿಂಗ್​ನಲ್ಲಿರುವ ಬದಲಾವಣೆಯಿಂದ ಇದು ಸಂಭವಿಸಿದೆ ಎಂದು ತಿಳಿಸಿದ್ದಾರೆ.

ಇದೀಗ ದುರಸ್ತಿ ಕಾರ್ಯದ ಕಡೆಗೆ ಸಚಿವರು ಹೆಚ್ಚಿನ ಗಮನಹರಿಸಿದ್ದಾರೆ. ಜೂನ್​ 7ರ ಹೊತ್ತಿಗೆ ಕಾರ್ಯಗಳು ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಸ್ಥಳ ಪರಿಶೀಲನೆ ನಡೆಸಿದರು, ಮೃತದೇಹಗಳನ್ನು ಸಾಗಿಸುವ ಕೆಲಸಗಳು ಪೂರ್ಣಗೊಂಡಿದೆ. ಬುಧವಾರದಷ್ಟೊತ್ತಿಗೆ ಮರುಸ್ಥಾಪನೆ ಕಾರ್ಯ ಪೂರ್ಣಗೊಳ್ಳಲಿದ್ದು, ರೈಲು ಎಂದಿನಂತೆ ಸಂಚರಿಸಬಹುದು ಎಂದಿದ್ದಾರೆ.

ಈ ರೈಲಿನ ಕೆಲವು ಬೋಗಿಗಳು ಹಾದುಹೋಗುತ್ತಿದ್ದ ಯಶವಂತಪುರ-ಹೌರಾ ಎಕ್ಸ್‌ಪ್ರೆಸ್‌ನ ಹಿಂಭಾಗಕ್ಕೂ ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ 288 ಜನರು ಸಾವನ್ನಪ್ಪಿದ್ದಾರೆ. 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡ ಸುಮಾರು 56 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಶನಿವಾರ ಮಧ್ಯಾಹ್ನದ ವೇಳೆಗೆ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಮುಗಿದಿದೆ. ಬಳಿಕ ಅಪಘಾತದ ಕೋಚ್‌ಗಳನ್ನು ತೆಗೆದುಹಾಕಲಾಗಿದ್ದು, ಈಗ ಟ್ರ್ಯಾಕ್‌ಗಳನ್ನು ಹಾಕುವ ಮತ್ತು ವಿದ್ಯುತ್ ಕಂಬಗಳು ಮತ್ತು ತಂತಿಗಳನ್ನು ಅಳವಡಿಸುವ ಕೆಲಸ ನಡೆಯುತ್ತಿದೆ. 1000ಕ್ಕೂ ಹೆಚ್ಚು ರೈಲ್ವೆ ನೌಕರರು ಈ ಕಾರ್ಯದಲ್ಲಿ ತೊಡಗಿದ್ದಾರೆ, ದುರಸ್ತಿ ಕಾರ್ಯಕ್ಕಾಗಿ 7ಕ್ಕೂ ಹೆಚ್ಚು ಪೊಕ್ಲೆನ್ ಯಂತ್ರಗಳು, ಕ್ರೇನ್ ಇತ್ಯಾದಿಗಳನ್ನು ಅಳವಡಿಸಲಾಗಿದೆ.

lokesh

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

8 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

9 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

10 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

10 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

10 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

10 hours ago