ಬೆಂಗಳೂರು : ಬರೋಬ್ಬರಿ 3 ಲಕ್ಷದ 84 ಸಾವಿರದ 400 ಕೀಲೋ ಮೀಟರ್ ದೂರದಲ್ಲಿರುವ ಚಂದ್ರನ ಮೇಲೆ ಪ್ರಗ್ಯಾನ್ ರೋವರ್ ಅಧ್ಯಯನ ಚುರುಕುಗೊಂಡಿದೆ. ಚಂದ್ರನ ಮೇಲೆ ಅಧ್ಯಯನ ಪ್ರಾರಂಭಿಸಿರುವ ಪ್ರಗ್ಯಾನ್ ರೋವರ್ ಬಗ್ಗೆ ಕ್ಷಣಕ್ಷಣದ ಮಾಹಿತಿ ನೀಡುತ್ತಿರುವ ಇಸ್ರೋ, ಇದೀಗ ಮತ್ತೊಂದು ದೊಡ್ಡ ಅಪ್ಡೇಟ್ ನೀಡಿದೆ. ಈ ಬಾರಿ ಪ್ರಗ್ಯಾನ್ ರೋವರ್, ಚಂದ್ರನ ತಾಪಮಾನದ ವರದಿ ಕಳುಹಿಸಿದೆ. 50 ಸೆಲ್ಸಿಯಸ್ನಿಂದ 10 ಸೆಲ್ಸಿಯಸ್ವರೆಗೆ ಹಗಲಿನ ತಾಪಮಾನ ಇದೆ ಎಂದು ಪ್ರಗ್ಯಾನ್ ರೋವರ್ ವರದಿ ಕಳುಹಿಸಿಕೊಟ್ಟಿದ್ದು, ಇದನ್ನು ಇಸ್ರೋ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದೆ.
ಮೈನಸ್ 10 ಡಿಗ್ರಿ ಸೆಲ್ಸಿಯಸ್ನಿಂದ 60 ಡಿಗ್ರಿವರೆಗೆ ತಾಪಮಾನ ಇದೆ ಎಂದು ರೋವರ್ ಮಾಹಿತಿ ನೀಡಿದ್ದು, ಅದನ್ನು ಇಸ್ರೋ ಗ್ರಾಫ್ ಸಮೇತ ವಿವರಿಸಿದೆ. ಈ ಬಗ್ಗೆ ಟ್ವೀಟ್ ಮೂಲಕ ಹಂಚಿಕೊಂಡಿರುವ ಇಸ್ರೋ, ಚಂದ್ರನ ದಕ್ಷಿಣ ಧೃವದಲ್ಲಿ ಪ್ರಗ್ಯಾನ್ ರೋವರ್ ಸಂಚರಿಸುತ್ತಿದ್ದು, ಇದೀಗ ಸೆನ್ಸಾರ್ಗಳ ಮೂಲಕ ಚಂದ್ರನ ತಾಪಮಾನ ಪರೀಕ್ಷೆ ಮಾಡಿದೆ. 10 ಸೆನ್ಸಾರ್ಸ್ಗಳು ಚಂದ್ರನ 10 ಸೆ.ಮೀ ಆಳಕ್ಕೆ ಇಳಿದಿವೆ ಎಂದು ಇಸ್ರೋ ತಿಳಿಸಿದೆ.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…