BREAKING NEWS

ಸರ್ಕಾರಿ ಶಾಲೆ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ನೀಡುವ ಯೋಜನೆಗೆ ಆಗಸ್ಟ್ 18ರಂದು ಚಾಲನೆ

ಶಿವಮೊಗ್ಗ : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜತೆಗೆ ವಾರದಲ್ಲಿ ಎರಡು ಬಾರಿ ಮೊಟ್ಟೆ ಅಥವಾ ಬಾಳೆ ಹಣ್ಣು ನೀಡುವ ಯೋಜನೆಯು ಆಗಸ್ಟ್ 18ರಿಂದ ಪ್ರಾರಂಭವಾಗಲಿದೆ. ಮಂಡ್ಯ ಜಿಲ್ಲೆಯಲ್ಲಿ ಈ ಯೋಜನೆಯು ಉದ್ಘಾಟನೆಗೊಳ್ಳಲಿದೆ ಎಂದು ಪ್ರಾಥಮಿಕ ಹಾಗೂ ಪೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಈ ಮೊದಲು 8 ನೇ ತರಗತಿಯವರೆಗೆ ಈ ಯೋಜನೆ ಜಾರಿಗೊಳಿಸಬೇಕು ಎಂದಾಗಿತ್ತು. ಆದರೆ ಈಗ ಹತ್ತನೇ ತರಗತಿವರೆಗೂ ವಿಸ್ತರಿಸಬೇಕು ಎಂಬ ನಿರ್ಧಾರ ಕೈಗೊಳ್ಳಲಾಗಿದೆ. ಪೌಷ್ಟಿಕಾಂಶಯುಕ್ತ ಆಹಾರ ನೀಡುವ ಹಿನ್ನಲೆಯಲ್ಲಿ ಈ ಯೋಜನೆಯು ಜಾರಿಗೆ ಬರಲಿದೆ ಎಂದು ಅವರು ತಿಳಿಸಿದ್ದಾರೆ.

ವಾರದಲ್ಲಿ ಎರಡು ಬಾರಿ ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ಮೊಟ್ಟೆ ವಿತರಿಸಲಾಗುವುದು. ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗಾಗಿ ಬಾಳೆಹಣ್ಣನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ರಾಜ್ಯದ ವಿದ್ಯಾರ್ಥಿಗಳು ಅಪೌಷ್ಠಿಕತೆ ಹಾಗೂ ಅನೀಮಿಯಾದಿಂದ ಬಳಲುತ್ತಿರುವುದರಿಂದ ಮೊಟ್ಟೆ ಅಥವಾ ಬಾಳೆಹಣ್ಣು ವಿತರಣೆ ಅನಿವಾರ್ಯವಾಗಿದೆ ಎಂದು ಸರ್ಕಾರ ಪ್ರತಿಪಾದಿಸಿದೆ. ಆದರೆ ಮೊಟ್ಟೆ ವಿತರಣೆ ವಿಚಾರವಾಗಿ ಆಕ್ಷೇಪಗಳು ವ್ಯಕ್ತವಾಗಿದ್ದವು. ಮೊಟ್ಟೆ ವಿತರಣೆಯು ವಿದ್ಯಾರ್ಥಿಗಳಲ್ಲಿ ಅಸಮಾನತೆಗೆ ಕಾರಣವಾಗಲಿದೆ ಎಂದು ಹಲವರು ವಾದಿಸಿದ್ದರು. ಆದರೆ, ಮೊಟ್ಟೆಯು ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಅವಶ್ಯಕವಾಗಿದೆ. ಆರೋಗ್ಯಕರ ಆಹಾರ ಸೇವನೆಯಿಂದ ವಿದ್ಯಾರ್ಥಿಗಳಲ್ಲಿ ಕಲಿಕೆಯ ಸಾಮರ್ಥ್ಯವೂ ಹೆಚ್ಚಳವಾಗುತ್ತದೆ ಎಂದು ಮೊಟ್ಟೆ ವಿತರಣೆಯ ಪರ ಹಲವರು ಪ್ರತಿಪಾದಿಸಿದ್ದರು.

2007ರಲ್ಲಿಯೇ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಈ ಯೋಜನೆಯನ್ನು ಜಾರಿಗೊಳಿಸುವ ಕುರಿತು ಚಿಂತನೆ ನಡೆಸಿದ್ದರು. ಆದರೆ ಸಮಾಜದ ಕೆಲ ಗುಂಪುಗಳಿಂದ ಭಾರಿ ವಿರೋಧ ವ್ಯಕ್ತವಾಗಿದ್ದರಿಂದ ಅಲ್ಲಿಗೆ ಕೈಬಿಡಲಾಗಿತ್ತು. ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ಅಥವಾ ಚಿಕ್ಕಿಯನ್ನು ವಿತರಿಸುವುದಾಗಿ ಸರ್ಕಾರ ಹೇಳಿತ್ತು. ಈಗ ಚಿಕ್ಕಿ ನೀಡುವ ಯೋಜನೆಯನ್ನು ಕೈಬಿಟ್ಟು ಬಾಳೆಹಣ್ಣನ್ನು ನೀಡುವುದಾಗಿ ಘೋಷಿಸಿದೆ.
andolanait

Recent Posts

ಕನ್ನಡಿಗರಿಗೆ ಉದ್ಯೋಗ ನೀಡದ ಸಾಹಿತ್ಯ ಸಮ್ಮೇಳನ: ವಾಟಲ್‌ ನಾಗರಾಜ್‌ ಆಕ್ರೋಶ

ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…

16 mins ago

ಹಾಸ್ಯ ಸಾಹಿತ್ಯ ಆಧುನಿಕ ಬದುಕಿಗೆ ಔಷಧಿ: ಪ್ರೊ.ಕರಿಯಪ್ಪ

ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…

25 mins ago

ಸಿ & ಡಿ ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ: ಯು.ಟಿ. ಖಾದರ್

ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…

60 mins ago

ಸಿ.ಟಿ ರವಿ ಕೊಲೆಗೆ ಪೊಲೀಸರ ಸಂಚು: ಅಶೋಕ್‌ ಆರೋಪ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…

1 hour ago

ವಿರಾಜಪೇಟೆ | ಬಿಟ್ಟಂಗಾಲದಲ್ಲಿ ಚಿರತೆ ಬೆಕ್ಕು ಸಾವು

ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…

1 hour ago

ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ನಟ ದರ್ಶನ್‌ ವಾಸ್ತವ್ಯ

ಮೈಸೂರು: ನಟ ದರ್ಶನ್‌ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…

2 hours ago