ಚೆನ್ನೈ : ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥ ಸಂಚಲನಕ್ಕೆ ಸುಪ್ರೀಂ ಕೋರ್ಟ್‌ನಿಂದ ಹಸಿರು ನಿಶಾನೆ ಸಿಕ್ಕಿದ ಬೆನ್ನಲ್ಲೇ ತಮಿಳುನಾಡಿನಾದ್ಯಂತ 45 ಸ್ಥಳಗಳಲ್ಲಿ ಆರ್ ಎಸ್ ಎಸ್ ಪಥ ಸಂಚಲನ ನಡೆಯಿತು. ಪಥ ಸಂಚಲನವು ತನ್ನ ನಿಯಮಿತ ತರಬೇತಿಯ ಭಾಗವಾಗಿದೆ ಎಂದು ಆರ್ ಎಸ್ ಎಸ್ ಹೇಳಿದೆ.
ಆರ್ ಎಸ್ ಎಸ್ ಸ್ವಯಂಸೇವಕರು ಬಿಳಿ ಬಣ್ಣದ ಅಂಗಿ ಮತ್ತು ಖಾಕಿ ಪ್ಯಾಂಟ್ ಧರಿಸಿ ಪಾಲ್ಗೊಂಡಿದ್ದರು. ಪಥ ಸಂಚಲನ ನಡೆಯುವ ಮಾರ್ಗದ ಉದ್ದಕ್ಕೂ ಪೊಲೀಸ್ ಭದ್ರತೆ ನಿಯೋಜಿಸಲಾಗಿತ್ತು. ಪಥ ಸಂಚಲನ ಶಾಂತಿಯುತವಾಗಿ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಚೆನ್ನೈ, ಮದುರೈ, ಕಾಂಚಿಪುರಂ ಮತ್ತು ಚೆಂಗಲ್‌ಪೇಟೆ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಈ ಪಥಸಂಚಲನದಲ್ಲಿ ಕೇಂದ್ರ ಸಚಿವ ಎಲ್. ಮುರುಗನ್ ಪಾಲ್ಗೊಂಡರು.
ಆರ್ ಎಸ್ ಎಸ್ ಗೆ ರಾಜ್ಯದಲ್ಲಿ ಪಥಸಂಚಲನ ನಡೆಸಲು ಅನುಮತಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್, ಇದೇ ಏಪ್ರಿಲ್ 11ರಂದು ಎತ್ತಿಹಿಡಿದಿದೆ.
ದಿನಗೂಲಿ ಕಾರ್ಮಿಕರು, ವಿದ್ಯಾರ್ಥಿಗಳು, ಸಮಾಜದಲ್ಲಿ ಉತ್ತಮ ಸ್ಥಾನದಲ್ಲಿರುವ ವೃತ್ತಿಪರರು, ಕೈಗಾರಿಕೆ, ಕಚೇರಿಗಳು ಹಾಗೂ ವಿವಿಧ ಸಂಸ್ಥೆಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳು ಸ್ವಯಂಸೇವಕರಾಗಿ ಉತ್ತಮ ತರಬೇತಿ ಪಡೆದು, ಈ ಸಂಘಟನೆಯ ಸದಸ್ಯರಾಗಿದ್ದಾರೆ ಎಂದು ಆರ್ ಎಸ್ ಎಸ್ ಹೇಳಿಕೆಯಲ್ಲಿ ತಿಳಿಸಿದೆ.
ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…
ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…
ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…
ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…
ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…
‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…